ಬಾಗಲಕೋಟೆ : ಬಾದಾಮಿ ತಾಲೂಕಿನ ಮುಷ್ಟಿಗೇರಿ ಗ್ರಾಮದಲ್ಲಿ ಬಿ.ಆರ್ ಅಂಬೇಡ್ಕರ್ ವಸತಿ ನಿಲಯದ ಕಟ್ಟಡಕ್ಕೆ ಅಡಿಗಲ್ಲು ಸೇರಿದಂತೆ, ತಾಲೂಕಿನಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ಸಮಾರಂಭ ನಾಳೆ ನಡೆಯಲಿದೆ.
ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮಲು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಶಾಸಕ ಸಿದ್ದರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಚುನಾವಣೆ ಬಳಿಕ ಸಚಿವ ಶ್ರೀರಾಮಲು ಹಾಗೂ ಸಿದ್ದರಾಮಯ್ಯನವರು ಒಂದೇ ವೇದಿಕೆ ಹಂಚಿಕೊಳ್ಳುವುದು ಇದೇ ಮೊದಲ ಬಾರಿಯಾಗಿದೆ. ಈಗಾಗಲೇ ಸಿಎಂ ಬಿಎಸ್ವೈ, ಶಾಸಕ ಸಿದ್ದರಾಮಯ್ಯ, ಸಚಿವರಾದ ಶ್ರೀರಾಮುಲು, ಗೋವಿಂದ ಕಾರಜೋಳ ಅವರ ಭಾವಚಿತ್ರ ಇರುವ ಕಟೌಟ್, ಬ್ಯಾನರ್ಗಳು ಎಲ್ಲೆಡೆ ರಾರಾಜಿಸುತ್ತಿವೆ.