ETV Bharat / state

ಕೊರೊನಾ ಸಂದರ್ಭದಲ್ಲಿ ಟೀಕೆ, ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ: ಸಚಿವ ಶೆಟ್ಟರ್ - Minister Jagadish Shettar

ಪ್ರತಿಪಕ್ಷದವರು ರಾಜಕಾರಣ ಮಾಡುವುದಕ್ಕೆ ಬೆಳಗ್ಗೆಯಿಂದ ಸಂಜೆಯವರೆಗೂ ಟೀಕೆ ಮಾಡುವುದರಲ್ಲಿಯೇ ಕಾಲ ಕಳೆಯುತ್ತಿದ್ದೀರಿ. ಅದರ ಬದಲು ನೈಜತೆ ಬಗ್ಗೆ ವಿಚಾರ ಮಾಡಿ ಎಂದು ಕೈಗಾರಿಕಾ ಸಚಿವ ಜಗದೀಶ್​ ಶೆಟ್ಟರ್ ಸಲಹೆ ನೀಡಿದ್ರು.

ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್
ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್
author img

By

Published : Jul 17, 2020, 4:55 PM IST

Updated : Jul 17, 2020, 5:36 PM IST

ಬಾಗಲಕೋಟೆ: ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಕೊರೊನಾ ಸಮಯದಲ್ಲಿ ಟೀಕೆ-ಟಿಪ್ಪಣಿ, ಅಪಪ್ರಚಾರ ಮಾಡುವುದನ್ನು ನಿಲ್ಲಿಸಿ ನೈಜತೆ ಬಗ್ಗೆ ವಿಚಾರ ಮಾಡಲಿ ಎಂದು ಕೈಗಾರಿಕಾ ಸಚಿವ ಜಗದೀಶ್​ ಶೆಟ್ಟರ್ ಸಲಹೆ ನೀಡಿದ್ರು.

ಕೈಗಾರಿಕಾ ಸಚಿವ ಜಗದೀಶ್​ ಶೆಟ್ಟರ್

ಬಾಗಲಕೋಟೆ ನಗರದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರೀ ರಾಜಕಾರಣ ಮಾಡುವುದಕ್ಕೆ ಬೆಳಗ್ಗೆಯಿಂದ ಸಂಜೆಯವರೆಗೂ ಟೀಕೆ ಮಾಡುವುದರಲ್ಲಿಯೇ ಕಾಲ ಕಳೆಯುತ್ತಿದ್ದೀರಿ ಎಂದು ಶೆಟ್ಟರ್ ಆರೋಪ ಮಾಡಿದ್ರು. ಇನ್ನು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವಿರೋಧಿ ಎಂದು ಆರೋಪ ಮಾಡಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಇದರಿಂದ ರೈತರಿಗೆ ತೊಂದರೆ ಆಗುವುದಿಲ್ಲ ಹಾಗೂ ಕೃಷಿ ಭೂಮಿ ಹಾಳಾಗುವುದಿಲ್ಲ ಎಂದರು.

ಬಾಗಲಕೋಟೆ-ವಿಜಯಪುರ ಜಿಲ್ಲೆಯಲ್ಲಿ ಯಾರಾದರೂ ಬಂಡವಾಳಶಾಹಿಗಳು ಬಂದು ಕೈಗಾರಿಕೆ ಮಾಡುವ ಇಚ್ಛೆ ವ್ಯಕ್ತಪಡಿಸಿದರೆ ಅವರಿಗೆ ಜಮೀನು ಒದಗಿಸಿ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ಒದಗಿಸಿಕೂಡಲಿದೆ ಎಂದು ಇದೇ ಸಮಯದಲ್ಲಿ ಹೇಳಿದ್ರು.

Last Updated : Jul 17, 2020, 5:36 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.