ಬಾಗಲಕೋಟೆ : ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಪ್ರವೇಶಕ್ಕೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ.
ಜಿಲ್ಲೆಯಲ್ಲಿ ಈಗಾಗಲೇ ಸೋಂಕಿತರ ಸಂಖೈ 200 ದಾಟಿದೆ ಮಾತ್ರವಲ್ಲ, ಗ್ರಾಮೀಣ ಮಟ್ಟದಲ್ಲಿಯೂ ಹರಡುತ್ತಿದೆ. ಹಾಗಾಗಿ ಜಿಲ್ಲಾಡಳಿತ ಭವನ, ತಾಲೂಕು ಭವನ, ತಹಸೀಲ್ದಾರರ ಕಚೇರಿ ಹಾಗೂ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಕಚೇರಿ ಸೇರಿದಂತೆ ಇತರ ಕಚೇರಿಗಳಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧ ಮಾಡಲಾಗಿದೆ.
ಅಗತ್ಯ ಸಂದರ್ಭಗಳಲ್ಲಿ ಮಾತ್ರ ಸ್ಕ್ಯಾನಿಂಗ್ ಮಶೀನ್ ಮೂಲಕ ಚೆಕ್ ಮಾಡಿದ ನಂತರ, ಸ್ಯಾನಿಟೈಸರ್ ಬಳಕೆ ಮತ್ತು ಕಟ್ಟು ನಿಟ್ಟಾಗಿ ಮಾಸ್ಕ್ ಇದ್ದರೆ ಮಾತ್ರ ಒಳಗೆ ಪ್ರವೇಶ ನೀಡಲಾಗುತ್ತಿದೆ.
ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಾತ್ರ ಹೊರಗಿನವರಿಗೆ ಯಾವುದೇ ಕಾರಣಕ್ಕೂ ಪ್ರವೇಶ ನೀಡುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಯನ್ನೇ ಹೊರಗೆ ಕರೆಯಿಸಿ, ಮಾಹಿತಿ ನೀಡುವ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಹರಡುತ್ತಿರುವ ಪರಿಣಾಮ ಜನ ಜಾಗೃತಿ ಮೂಡಿಸಿದ ನಂತರ ಜಿಲ್ಲಾಡಳಿತ, ಎಲ್ಲಾ ಕಚೇರಿಗಳಲ್ಲಿ ಈ ರೀತಿಯಾಗಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಆದೇಶ ಮಾಡಿದೆ.