ETV Bharat / state

ಮೇರು ವ್ಯಕ್ತಿತ್ವದ ಮಹಾ ಪುರುಷ ರಾಧಾಕೃಷ್ಣನ್ : ಡಿಸಿಎಂ ಕಾರಜೋಳ - Teachers day celebrate

ಬಾಗಲಕೋಟೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಭಾಗವಹಿಸಿದ್ದರು.

Bagalkote
Bagalkote
author img

By

Published : Sep 5, 2020, 5:36 PM IST

ಬಾಗಲಕೋಟೆ : ಅಪರೂಪದ ರಾಜಕಾರಣಿ, ಅತ್ಯುತ್ತಮ ವ್ಯಕ್ತಿತ್ವವುಳ್ಳ ತತ್ವಜ್ಞಾನಿ, ರಾಜನೀತಿಜ್ಞ, ಶಿಕ್ಷಕ, ಪ್ರಾಧ್ಯಾಪಕರು ಹಾಗೂ ಮೇರು ವ್ಯಕ್ತಿತ್ವದ ಮಹಾಪುರುಷ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳನ್ನ ನಾವು ಪಾಲಿಸಬೇಕಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದರು. ಅವರ ಧ್ಯೇಯ ವಾಕ್ಯ ಅನ್ನ ಹಸಿವನ್ನು ನೀಗಿಸಿದರೆ ಅಕ್ಷರ ಅಜ್ಞಾನವನ್ನು ನೀಗಿಸುವುದಾಗಿತ್ತು ಎಂದರು.

ದೇಶದಲ್ಲಿ ಕೊರೊನಾ ಭೀತಿಯ ಮಧ್ಯೆ ನೆರೆ, ಪ್ರವಾಹದಿಂದಾಗಿ ಸಾಕಷ್ಟು ಬೆಳೆ, ಆಸ್ತಿ ಹಾನಿಗೀಡಾಗಿದೆ. ಆರ್ಥಿಕವಾಗಿ ತೊಂದರೆಯಾಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ದಿ ಕಾರ್ಯವಾಗಿಲ್ಲ. ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ನಿಧನದಿಂದ ಶೋಕಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ರಾಧಾಕೃಷ್ಣನ್ ಅವರು ಸಾಧನೆ ಮೂಲಕ ಈಡೀ ದೇಶ ಗುರುತಿಸುವ ಕೆಲಸ ಮಾಡಿದ್ದಾರೆ. ಇವರ ಹಾದಿಯಲ್ಲಿ ಶಿಕ್ಷಕರು ನಡೆಯಬೇಕಾಗಿದೆ ಎಂದರು.

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮಕ್ಕಳಿಗೆ ಪಾಠದ ಜೊತೆಗೆ ಆಟ, ಪ್ರತಿಭೆ ಹಾಗೂ ವೃತ್ತಿಪರ ಚಟುವಟಿಕೆಗಳ ತರಬೇತಿ ನೀಡಲಾಗುತ್ತಿದೆ. ಆದ್ದರಿಂದ ಶಿಕ್ಷಕರು ಹೊಸ ನೀತಿಯನ್ನು ಅಧ್ಯಯನ ಮಾಡಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ ಎಂದರು.

ಬಳಿಕ ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಶಿಕ್ಷಣದಲ್ಲಿ ದೇಶದ ಭವಿಷ್ಯ ಅಡಗಿದ್ದು, ಶಿಕ್ಷಣ ನೀಡುವ ಶಿಕ್ಷಕರಿಗೆ ಗೌರವ ಸಲ್ಲಿಸುವ ಸಲುವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತಿದೆ. ಸಮಾನ ಅವಕಾಶ ದೊರಕಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ. ಗುಣಾತ್ಮಕ ಶಿಕ್ಷಣ ನೀಡಿ ಮಕ್ಕಳನ್ನು ಶಿಕ್ಷಣವಂತರು ಹಾಗೂ ಬುದ್ದಿವಂತರನ್ನಾಗಿ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷ ಚನ್ನನಗೌಡರ ಪರನಗೌಡ, ಜಿ.ಪಂ ಸದಸ್ಯೆ ಹನಮವ್ವ ಕರಿಹೊಳೆ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ:
ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 12 ಜನ ಶಿಕ್ಷಕರಿಗೆ ನೀಡಿ ಗೌರವಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.