ಬಾಗಲಕೋಟೆ: ಬಾವಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಯರನಕೇರಿ ಗ್ರಾಮದಲ್ಲಿ ನಡೆದಿದೆ.
ಬೇವಿನಮಟ್ಟಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ 16 ವರ್ಷದ ವಿದ್ಯಾರ್ಥಿನಿ ಮೃತಳು. ಬಾವಿಯಲ್ಲಿ ಶಾಲಾ ಸಮವಸ್ತ್ರದಲ್ಲಿಯೇ ವಿದ್ಯಾರ್ಥಿನಿ ಶವ ಪತ್ತೆ ಆಗಿದೆ. ಶನಿವಾರದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಪತ್ತೆಗೆ ಪಾಲಕರು ಹುಡುಕಾಟ ನಡೆಸಿದ್ದರು. ಆದ್ರೀಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಯಾರೋ ಪಾಪಿಗಳು ಮಗಳನ್ನು ಕೊಲೆಗೈದು ಬಾವಿಯಲ್ಲಿ ಎಸೆದಿದ್ದಾರೆ ಎಂದು ಪೋಷಕರು ಆರೋಪ ಮಾಡಿದ್ದಾರೆ.
![The body of the SSLC student was found in well at bagalkote](https://etvbharatimages.akamaized.net/etvbharat/prod-images/10933937_mdtnik5rjm.jpg)
ಓದಿ: ಬಸ್ನಲ್ಲಿ ವೈದ್ಯ ವಿದ್ಯಾರ್ಥಿನಿಗೆ ಕಿರುಕುಳ: ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಾಮುಕ ಪೊಲೀಸರ ವಶಕ್ಕೆ
ಪೊಲೀಸ್ ತನಿಖೆಯಿಂದ ಸಾವಿನ ಸತ್ಯಾಂಶ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡಿಸಿ, ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.