ETV Bharat / state

ಸಾವಳಗಿ ಪಟ್ಟಣವನ್ನು ತಾಲೂಕು ಎಂದು ಘೋಷಿಸಲು ಆಗ್ರಹಿಸಿ ಚುನಾವಣೆ ಬಹಿಷ್ಕಾರ - ಬಾಗಲಕೋಟೆ ಸುದ್ದಿ

ನೂತನ ತಾಲೂಕು ಘೋಷಣೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿ ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಿಲ್ಲ. ಇದರಿಂದ ಮಾರ್ಚ್ 30ರಂದು ನಡೆಯುವ ಗ್ರಾಮ ಪಂಚಾಯತ್ ಚುನಾವಣೆ ಸಾವಳಗಿ ಹೋರಾಟ ಸಮಿತಿ ವತಿಯಿಂದ ಧರಣಿ ಆರಂಭಿಸಿದ್ದಾರೆ..

boycott of the election
ಚುನಾವಣೆ ಬಹಿಷ್ಕಾರ
author img

By

Published : Mar 16, 2021, 4:41 PM IST

ಬಾಗಲಕೋಟೆ : ಸಾವಳಗಿ ಪಟ್ಟಣವನ್ನು ನೂತನ ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ಸ್ಥಳೀಯರು ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡಿ, ಪ್ರತಿಭಟನೆ ನಡೆಸಿದ್ದಾರೆ.

ಸಾವಳಗಿ ಗ್ರಾಮವನ್ನು ತಾಲೂಕು ಮಾಡಬೇಕು ಎಂದು ಆಗ್ರಹಿಸಿ ದಶಕಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೂ ಸಹ ತಾಲೂಕು ಎಂದು ಘೋಷಣೆ ಮಾಡಿಲ್ಲ. ಕಳೆದ ಬಾರಿ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕಾರ ಮಾಡಿರುವುದರಿಂದ ಈಗ ಮತ್ತೆ ಚುನಾವಣೆ ನಡೆಸಲು ಚುನಾವಣೆ ಆಯೋಗ ಸೂಚಿಸಿದೆ. ಈಗಲೂ ಚುನಾವಣೆ ಬಹಿಷ್ಕಾರ ಮಾಡಿ, ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದ್ದಾರೆ.

ಚುನಾವಣೆ ಬಹಿಷ್ಕಾರ

ನೂತನ ತಾಲೂಕು ಘೋಷಣೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿ ಗ್ರಾಮ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸಿಲ್ಲ. ಇದರಿಂದ ಮಾರ್ಚ್ 30ರಂದು ನಡೆಯುವ ಗ್ರಾಮ ಪಂಚಾಯತ್ ಚುನಾವಣೆ ಸಾವಳಗಿ ಹೋರಾಟ ಸಮಿತಿ ವತಿಯಿಂದ ಧರಣಿ ಆರಂಭಿಸಿದ್ದಾರೆ.

ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ತಾಲೂಕು ಘೋಷಣೆ ಮಾಡಲು ಸರ್ಕಾರ ತಾರತಮ್ಯ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಸಾವಳಗಿ ಗ್ರಾಮಕ್ಕೆ ಜನಪ್ರತಿನಿಧಿಗಳ ಪ್ರವೇಶ ನಿರ್ಬಂಧಿಸುವ ಬಗ್ಗೆ ಚರ್ಚೆ ಕೂಡ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.