ಬಾಗಲಕೋಟೆ : ಗುಳೇದಗುಡ್ಡ ತಾಲೂಕಿನ ಬೂದಿನಗಡ ಗ್ರಾಮದಲ್ಲಿ ಮಹಿಳೆಯೋರ್ವಳು ಮೃತ ಪಟ್ಟಿದ್ದು, ಗಂಟಲ ದ್ರವ ಮಾದರಿ ಪರೀಕ್ಷೆ ವರದಿ ಇನ್ನೂ ಬಾರದ ಕಾರಣ ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
42 ವರ್ಷದ ಮಹಿಳೆಯು ಅನಾರೋಗ್ಯದಿಂದ ಮೃತಪಟ್ಟಿದ್ದು, ತಹಶೀಲ್ದಾರರ ಆದೇಶದಂತೆ ಪಿಪಿಇ ಕಿಟ್ ಧರಿಸಿ, ಕಂದಾಯ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ಹೊರವಲಯದಲ್ಲಿ ಮಹಿಳೆಯ ಅಂತ್ಯ ಸಂಸ್ಕಾರ ನಡೆಸಿದರು.