ಬಾಗಲಕೋಟೆ : ಬಾದಾಮಿ ತಾಲೂಕಿನ ಹಾಗನೂರು ಹಾಗೂ ಅಲೂರ ಎಸ್‌ಕೆ ಗ್ರಾಮದಲ್ಲಿ ನರೇಗಾ ಹಾಗೂ ರಸ್ತೆ ಅಭಿವೃದ್ಧಿ ಯೋಜನೆಯಡಿ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆದಿದೆ ಎಂದು ಆರ್ ಎಸ್ ದೇಸಾಯಿ ಹಾಗೂ ಜಿ ಎಸ್ ಶಿವನಗೌಡರ ಎಂಬುವರು ಆರೋಪಿಸಿದ್ದಾರೆ.
ನವನಗರದ ಪ್ರೆಸ್ ಕ್ಲಬ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಾಗನೂರ ಗ್ರಾಮದಲ್ಲಿ ಅನೇಕ ರಸ್ತೆಗಳು ಹಾಳಾಗಿವೆ. ಅಭಿವೃದ್ಧಿ ಕೆಲಸ ಮಾಡದೆ ನೀರಾವರಿ ಇಲಾಖೆಗೆ ಸೇರಿದ ಅನೇಕ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದೆ ಎಂದು ಸುಮಾರು ₹11 ಲಕ್ಷ ಹಣ ನರೇಗಾ ಯೋಜನೆಯಲ್ಲಿ ವೆಚ್ಚ ಮಾಡಿರುವುದು ದಾಖಲೆಯಲ್ಲಿ ತೋರಿಸಿದ್ದಾರೆ.
ಕಳೆದ ಐದು ವರ್ಷದಿಂದ ಗ್ರಾಮ ಸಭೆ ನಡೆಸಿರುವುದಿಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿ 15 ಲಕ್ಷದವರೆಗೆ ಅವ್ಯವಹಾರ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅವ್ಯವಹಾರದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.