ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು 18 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆಯಲ್ಲಿ ಇಂದು 18 ಮಂದಿಗೆ ಸೋಂಕು ದೃಢವಾಗಿದ್ದು ಅಷ್ಟೂ ಮಂದಿಯನ್ನು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ತಾಲೂಕಿನ ಚಿಕ್ಕ ಮ್ಯಾಗೇರಿ ಗ್ರಾಮದ ಮೃತಪಟ್ಟ 57 ವರ್ಷದ P-10173 ವ್ಯಕ್ತಿಗೆ ಕೋವಿಡ್ ದೃಢಪಟ್ಟಿದೆ.
ಹುಬ್ಬಳ್ಳಿ ರೈಲ್ವೆ ಇಲಾಖೆಯ ಟಿಕೆಟ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ವ್ಯಕ್ತಿ, ಮಹಾರಾಷ್ಟ್ರದ ಮಿರಜ್ಗೆ ಕರ್ತವ್ಯಕ್ಕೆಂದು ತೆರಳಿ ಜೂನ್ 6 ರಂದು ಊರಿಗೆ ಆಗಮಿಸಿದ್ದರು. ಜ್ವರದಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟಿದ್ದರು. ಕೋವಿಡ್ ನಿಯಮದಂತೆ ಮೃತ ವ್ಯಕ್ತಿಯ ಗಂಟಲು ದ್ರವ ಪರೀಕ್ಷಿಸಲಾಗಿದ್ದು ಕೋವಿಡ್ ಇರುವುದು ದೃಢಪಟ್ಟಿದೆ.
ಮುನ್ನಚ್ಚರಿಕೆ ಕ್ರಮವಾಗಿ ನೌಕರನ ಕುಟುಂಬದ ಸದಸ್ಯರನ್ನು ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ಚಿಕ್ಕಮ್ಯಾಗೇರಿ ಗ್ರಾಮವನ್ನು ಸೀಲ್‌ಡೌನ್‌ಮಾಡಲಾಗಿದೆ.