ಬಾಗಲಕೋಟೆ: ಜಿಲ್ಲೆಯಲ್ಲಿ 88 ಜನ ಕೋವಿಡ್ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆಯಾಗಿದ್ದು, ಹೊಸದಾಗಿ 128 ಕೊರೊನಾ ಪ್ರಕರಣಗಳು ಮಂಗಳವಾರ ದೃಢಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10,186 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಒಟ್ಟು 8,817 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ ತಾಲೂಕಿನಲ್ಲಿ 40, ಬಾದಾಮಿ 12, ಹುನಗುಂದ 33, ಬೀಳಗಿ 5, ಮುಧೋಳ 24, ಜಮಖಂಡಿ 14 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾ ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 1,569 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 102,596 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 90,334 ನೆಗಟಿವ್ ಪ್ರಕರಣ, 10,186 ಪಾಸಿಟಿವ್ ಪ್ರಕರಣ ಹಾಗೂ 105 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1264 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 409 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ್ ಆಗಿರುತ್ತವೆ. ಕಂಟೇನ್ಮೆಂಟ್ ಝೋನ್ 722 ಇರುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.