ETV Bharat / state

ಮತ ಎಣಿಕೆ ಸಿಬ್ಬಂದಿಗೆ ಜಿಲ್ಲಾಡಳಿತದಿಂದ ತರಬೇತಿ - kannadanews

ಮೇ 23 ರಂದು ಲೋಕಸಭಾ ಚುನಾವಣಾ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯಕ್ಕೆ ನೇಮಕಗೊಂಡ ಮೇಲ್ವಿಚಾರಕರು ಹಾಗೂ ಸಹಾಯಕರಿಗೆ ಜಿಲ್ಲಾಡಳಿತದ ವತಿಯಿಂದ ತರಬೇತಿ ನೀಡಲಾಯ್ತು.

ಮತ ಎಣಿಕೆ ಸಿಬ್ಬಂದಿಗೆ ಜಿಲ್ಲಾಡಳಿತದಿಂದ ತರಬೇತಿ
author img

By

Published : May 18, 2019, 8:20 AM IST

ಬಾಗಲಕೋಟೆ: ಲೋಕಸಭಾ ಚುನಾವಣೆ-2019ರ ಮತ ಎಣಿಕೆ ಕಾರ್ಯ ಮೇ 23 ರಂದು ನಡೆಯಲಿದ್ದು, ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಮೇಲ್ವಿಚಾರಕರು ಹಾಗೂ ಸಹಾಯಕರಿಗೆ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‍ನಲ್ಲಿ ತರಬೇತಿ ನೀಡಲಾಯಿತು.

ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಒಟ್ಟು 8 ವಿಧಾನಸಭಾ ಮತಕ್ಷೇತ್ರಗಳಿವೆ. ಹೀಗಾಗಿ ಅವುಗಳಿಗೆ ಒಟ್ಟು 160 ಮೇಲ್ವಿಚಾರಕರು ಹಾಗೂ 160 ಸಹಾಯಕರು ಸೇರಿ ಒಟ್ಟು 320 ಸಿಬ್ಬಂದಿಗಳಿಗೆ ತರಬೇತಿ ನೀಡಲಾಯಿತು. ತರಬೇತಿಯಲ್ಲಿ ತಾಂತ್ರಿಕ ಸಿಬ್ಬಂದಿಗಳು ಸಹ ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಆರ್.ರಾಮಚಂದ್ರನ್ ಅವರು ಮತ ಎಣಿಕೆ ಕಾರ್ಯಕ್ಕೆ ನೇಮಕಗೊಂಡ ಪ್ರತಿಯೊಬ್ಬ ಸಿಬ್ಬಂದಿಗಳು ಸಂರ್ಪೂಣವಾಗಿ ತರಬೇತಿಯನ್ನು ಪಡೆದುಕೊಂಡು ಜವಾಬ್ದಾರಿತನದಿಂದ ಕೆಲಸ ನಿರ್ವಹಿಸುವಂತೆ ಸೂಚಿಸಿದರು.

staff
ಮತ ಎಣಿಕೆ ಸಿಬ್ಬಂದಿಗೆ ಜಿಲ್ಲಾಡಳಿತದಿಂದ ತರಬೇತಿ

ಇನ್ನೂ ತರಬೇತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಉಪ ವಿಭಾಗಾಧಿಕಾರಿಗಳಾದ ಹೆಚ್.ಜಯಾ, ಇಕ್ರಮ, ಎನ್.ಐ.ಸಿಯ ಗಿರಿಯಾಚಾರ, ಜಿ.ಪಂ. ಉಪ ಕಾರ್ಯದರ್ಶಿ ದುರ್ಗೇಶ ರುದ್ರಾಕ್ಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

sample description
ETV Bharat Logo

Copyright © 2025 Ushodaya Enterprises Pvt. Ltd., All Rights Reserved.