ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಇಬ್ಬರು ಸೋಂಕಿತರು ಮೃತ ಪಟ್ಟಿರುವುದು ವರದಿಯಾಗಿದೆ.
ನವನಗರದ ಸೆಕ್ಟರ್ ನಂ.56 ರ ನಿವಾಸಿ 74 ವರ್ಷದ ವೃದ್ಧ ಹಾಗೂ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ 44 ವರ್ಷದ ಪುರುಷ ಕೋವಿಡ್ -19ಗೆ ಬಲಿಯಾದವರು. ಮೃತಪಟ್ಟ ವ್ಯಕ್ತಿಗಳಿಗೆ ಸಾರಿ (Sari) ಲಕ್ಷಣದಿಂದಾಗಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಚಿಕಿತ್ಸೆ ನೀಡಿದರೂ ಸಹ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಮಧ್ಯೆ ಮುಧೋಳ ಪಟ್ಟಣದ ಪತ್ರಕರ್ತರೊಬ್ಬರು ಮೃತಪಟ್ಟಿದ್ದು, ಇವರಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಇನ್ನೂ ದೃಢ ಪಟ್ಟಿಲ್ಲ. 60 ವರ್ಷದ ವ್ಯಕ್ತಿಯನ್ನು ಕಳೆದ ಮೂರು ದಿನಗಳ ಹಿಂದೆ ಕೊರೊನಾ ಶಂಕೆಯ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆ ಕರೆ ತರಲಾಗಿತ್ತು. ಗಂಟಲು ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇನ್ನು ಅಧಿಕೃತವಾಗಿ ವರದಿ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಮದಂತೆ ಮೃತರ ಅಂತ್ಯ ಸಂಸ್ಕಾರ ನೇರವೇರಿಸಲಾಗುವುದು. ಇದರಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ.