ETV Bharat / state

ಟಾಟಾ ಏಸ್ ವಾಹನಕ್ಕೆ ಗುದ್ದಿದ ಅಪರಿಚಿತ ವಾಹನ: ಇಬ್ಬರು ಸಾವು, 10 ಮಂದಿಗೆ ಗಾಯ

author img

By

Published : Feb 6, 2022, 2:22 PM IST

ಅಪರಿಚಿತ ವಾಹನವೊಂದು ಟಾಟಾ ಏಸ್ ವಾಹನಕ್ಕೆ ಹಿಂಬದಿಯಿಂದ ಗುದ್ದಿದ್ದು, 4 ವರ್ಷದ ಬಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಹತ್ತು ಜನರಿಗೆ ಗಾಯವಾದ ಘಟನೆ ಬಾಗಲಕೋಟೆಯ ಹಳಗೇರಿ ಗ್ರಾಮದ ಬಳಿ ಸಂಭವಿಸಿದೆ.

Accidenttwo-died-in-road-accident-at-bagalkot
Accidentಟಾಟಾ ಏಸ್ ವಾಹನಕ್ಕೆ ಗುದ್ದಿದ ಅಪರಿಚಿತ ವಾಹನ: ಇಬ್ಬರು ಸಾವು, 10 ಮಂದಿಗೆ ಗಾಯ

ಬಾಗಲಕೋಟೆ: ಅಪರಿಚಿತ ವಾಹನವೊಂದು ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟು, ಹತ್ತಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಬಾದಾಮಿ ತಾಲೂಕಿನ ಹಳಗೇರಿ ಗ್ರಾಮದ ಸಮೀಪ ನಡೆದಿದೆ.

ಶಿವು ಗೋಸಾವಿ (4) ಹಾಗೂ ಗೋಪಾಲ ಗೋಸಾವಿ (35) ಮೃತ ದುರ್ದೈವಿಗಳು. ಇಬ್ಬರೂ ವಿಜಯಪುರದಿಂದ ರಾಮದುರ್ಗಕ್ಕೆ ತೆರಳುತ್ತಿದ್ದರು. ಈ ವೇಳೆ ಹಳಗೇರಿ ಬಳಿ ಹಿಂಬದಿಯಿಂದ ಬಂದ ವಾಹನ ಟಾಟಾ ಏಸ್​ಗೆ ಗುದ್ದಿದೆ. ಪರಿಣಾಮ ಪಕ್ಕದಲ್ಲಿದ್ದ ಹೊಲಕ್ಕೆ ಟಾಟಾ ಏಸ್ ವಾಹನ ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಟಾಟಾ ಏಸ್ ವಾಹನಕ್ಕೆ ಗುದ್ದಿದ ಅಪರಿಚಿತ ವಾಹನ

ಈ ಕುರಿತು ಕೆರೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಓದಿ: ಮೌನವಾಯ್ತು ಹಾಡುಹಕ್ಕಿ: ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.