ETV Bharat / state

ಯೂರಿಯಾ ಕೃತಕ ಅಭಾವ ಸೃಷ್ಟಿಸಿದರೆ ಕಾನೂನು ಕ್ರಮ: ಬಾಗಲಕೋಟೆ ಡಿಸಿ ಎಚ್ಚರಿಕೆ - ಯೂರಿಯಾ ರಸಗೊಬ್ಬರ ಹಂಚಿಕೆ

ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಇಂದು ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಹಾಗೂ ರಸಗೊಬ್ಬರ ನಿರ್ವಹಣೆ ಕುರಿತು ಜರುಗಿತು. ಈ ವೇಳೆ ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಯಾದರೆ ಸಂಬಂಧಪಟ್ಟ ರಸಗೊಬ್ಬರ ಮಾರಾಟಗಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ತಿಳಿಸಿದರು.

Meeting in bagalakote
Meeting in bagalakote
author img

By

Published : Aug 29, 2020, 5:28 PM IST

ಬಾಗಲಕೋಟೆ: ಜಿಲ್ಲೆಯಲ್ಲಿ ಯೂರಿಯಾ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಯಾದರೆ ಸಂಬಂಧಪಟ್ಟ ರಸಗೊಬ್ಬರ ಮಾರಾಟಗಾರರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಇಂದು ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಹಾಗೂ ರಸಗೊಬ್ಬರ ನಿರ್ವಹಣೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಡಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ 40,133 ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ಹಂಚಿಕೆ ಮಾಡಲಾಗಿದೆ. ಒಂದು ವೇಳೆ ಅನಗತ್ಯವಾಗಿ ರಸಗೊಬ್ಬರ ಸಂಗ್ರಹ ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸಿದರೆ ಅಂತಹ ಮಾರಾಟಗಾರರ ಲೈಸನ್ಸ್ ರದ್ದುಪಡಿಸುವದರ ಜೊತೆಗೆ ಕಾನೂನಿನ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಈಗಾಗಲೇ ಕೆಲವೊಂದು ಕಡೆಗಳಲ್ಲಿ ಯೂರಿಯಾ ರಸಗೊಬ್ಬರದ ಅಭಾವ ಸೃಷ್ಟಿಯಾಗಿರುವ ಬಗ್ಗೆ ತಿಳಿದು ಬಂದಿದ್ದು, ಅದನ್ನು ಸರಿಪಡಿಸಿಕೊಳ್ಳಬೇಕು. ರೈತರಲ್ಲಿ ರಸಗೊಬ್ಬರದ ಬಗ್ಗೆ ಗೊಂದಲ ಸೃಷ್ಟಿಯಾಗಬಾರದು. ಈ ಬಾರಿ ಅಗತ್ಯಕ್ಕಿಂತ ಹೆಚ್ಚಿನ ರಸಗೊಬ್ಬರ ಹಂಚಿಕೆ ಮಾಡಲಾಗಿದ್ದು, ಇನ್ನೂ ಬೇಕಾದಲ್ಲಿ ತರಿಸಿಕೊಳ್ಳಲಾಗುತ್ತಿದೆ. ಯಾವುದೇ ರೈತರು ಗೊಬ್ಬರ ಸಿಕ್ಕಿಲ್ಲವೆಂದು ಬರಿಗೈಯಲ್ಲಿ ಹೋಗುವ ಸ್ಥಿತಿ ನಿರ್ಮಾಣವಾಗಬಾರದು. ರಸಗೊಬ್ಬರ ಸಮರ್ಪಕವಾಗಿ ವಿತರಣೆಯಾಗಬೇಕು ಎಂದರು.

ಅಲ್ಲದೇ ರಸಗೊಬ್ಬರವನ್ನು ಜಿಲ್ಲೆಯ ರೈತರಿಗೆ ಹೊರತುಪಡಿಸಿ ಬೇರೆ ಜಿಲ್ಲೆಯ ರೈತರಿಗೆ ಮಾರಾಟ ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ, ಸಂಬಂಧಪಟ್ಟ ಅಧಿಕಾರಿಗಳು ರಸಗೊಬ್ಬರ ಹಂಚಿಕೆ ಮಾಡಿದ ಮೇಲೆ ತಮ್ಮ ಜವಾಬ್ದಾರಿ ಮುಗಿಯಿತೆಂದು ತಿಳಿಯದೆ, ಹಂಚಿಕೆಯಾದ ರಸಗೊಬ್ಬರ ರೈತರಿಗೆ ವಿತರಣೆಯಾಗುತ್ತಿರುವ ಬಗ್ಗೆ ನಿಗಾ ವಹಿಸುವ ಕೆಲಸ ಮಾಡಬೇಕು. ಸೂಕ್ತ ತರಬೇತಿ ನೀಡಿದ ಮೇಲೆಯೇ ಲೈಸನ್ಸ್ ನೀಡಲಾಗಿರುತ್ತದೆ. ಹಾಗಾಗಿ ಸರಿಯಾಗಿ ನಿರ್ವಹಣೆಯಾಗಬೇಕು ಎಂದರು. ರಸಗೊಬ್ಬರ ಅಭಾವ ಸೃಷ್ಟಿಗೆ ಅವಕಾಶ ಮಾಡಿಕೊಡದೆ, ಆಗಿರುವ ತಪ್ಪುಗಳನ್ನು ತಿದ್ದಿಕೊಂಡು ಗೊಬ್ಬರ ರೈತರಿಗೆ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಮಾರಾಟಗಾರರು ಅನಗತ್ಯವಾಗಿ ಸ್ಟಾಕ್ ಇಟ್ಟುಕೊಂಡಿದ್ದರೆ ಕೂಡಲೇ ಅದರ ಜಪ್ತಿ ಕಾರ್ಯ ಆಗಬೇಕು. ಈ ಕುರಿತು ರಸಗೊಬ್ಬರ ಮಾರಾಟಗಾರರು ಸಭೆ ನಡೆಸಿ ಅಭಾವ ಸೃಷ್ಟಿ, ಗಲಾಟೆ, ಪ್ರತಿಭಟನೆಗಳು ನಡೆಯಲು ಅವಕಾಶ ನೀಡದಂತೆ ನೋಡಿಕೊಳ್ಳಬೇಕು. ಇಂತಹ ಘಟನೆಗಳು ನಡೆದಲ್ಲಿ ಇದಕ್ಕೆ ಕಾರಣರಾದವರ ಮೇಲೆ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ 440 ರಸಗೊಬ್ಬರ ಮಾರಾಟಗಾರರು, 76 ಸಗಟು ಮಾರಾಟಗಾರರು ಇದ್ದಾರೆ. ಅದರಲ್ಲಿ 127 ಸಹಕಾರ ಸಂಘಗಳು ಮತ್ತು 313 ಖಾಸಗಿ ಮಾರಾಟಗಾರರು ಇದ್ದಾರೆ. ಜಿಲ್ಲೆಯಲ್ಲಿ ರಸಗೊಬ್ಬರ ಮಾರಾಟಗಾರರಲ್ಲಿ 1,166 ಮೆಟ್ರಿಕ್ ಟನ್ ಯೂರಿಯಾ, 3,716 ಮೆ. ಟನ್ ಡಿಎಪಿ, 6,974 ಮೆ. ಟನ್ ಕಾಂಪ್ಲೇಕ್ಸ್, 2,969 ಮೆ. ಟನ್ ಎಂ.ಓಪಿ ಹಾಗೂ 629 ಮೆ. ಟನ್ ಎಸ್‍ಎಸ್‍ಪಿ ಮತ್ತು ಇತರೆ ರಸಗೊಬ್ಬರ ಲಭ್ಯವಿರುವುದಾಗಿ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.