ಬಾಗಲಕೋಟೆ: ಮೂರು ಬಾರಿ ಆಯ್ಕೆ ಆಗಿರುವ ಸಂಸದರು ತಮ್ಮ ಅಧಿಕಾರ ಅವಧಿಯಲ್ಲಿ ಏನು ಸಾಧನೆ ಮಾಡಿದ್ದಾರೆಂದು ತೋರಿಸಲಿ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಪ.ಸಿ.ಗದ್ದಿಗೌಡರ ಅವರಿಗೆ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪತ್ರಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಮೂರು ಅವಧಿಯಲ್ಲಿ ಹಿಂದಿನ ಸಂಸದರು ಯಾವ ರೀತಿಯಾಗಿ ಅಭಿವೃದ್ಧಿ ಪರ ಕೆಲಸ ಮಾಡಿದ್ದಾರೆ ಎಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ಈ ಬಾರಿ ಮೋದಿ ಅಲೆ ನಡೆಯುವುದಿಲ್ಲ. ರಾಜ್ಯದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತಿದ್ದು, ಮಹಿಳಾ ಪರ ಒಲವು ಹೆಚ್ಚಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಂದು ಒಳ್ಳೆಯ ದಿನ ಎಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಲಾಗಿದೆ. ಏಪ್ರಿಲ್ 1 ರಂದು ಕೆಪಿಸಿಸಿ ಅಧ್ಯಕ್ಷರಾದ ದಿನೇಶ ಗುಂಡೂರಾವ್, ಡಿಸಿಎಂ ಜಿ ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆ ಹಾಗೂ ಸಮಾವೇಶ ಹಮ್ಮಿಕೊಂಡು ನಾಮಪತ್ರ ಸಲ್ಲಿಸಲಾಗುವುದು ಎಂದು ವೀಣಾ ಕಾಶಪ್ಪನವರ ತಿಳಿಸಿದರು.