ಬಾಗಲಕೋಟೆ: ಮುಧೋಳ ಪಟ್ಟಣದಲ್ಲಿ ರನ್ನ ಸಕ್ಕರೆ ಕಾರ್ಖಾನೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದ ಟೆಂಟ್ಗೆ ಬೆಂಕಿ ಹಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯರಾದ ಆರ್.ಬಿ.ತಿಮ್ಮಾಪುರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸರು ಆರ್.ಬಿ.ತಿಮ್ಮಾಪುರ ಸೇರಿದಂತೆ ಇತರ ಕಾಂಗ್ರೆಸ್ ಪಕ್ಷದ ಮುಖಂಡರನ್ನು ವಶಕ್ಕೆ ಪಡೆದುಕೊಂಡರು.
ಬಿಜೆಪಿ ಪಕ್ಷದ ಮುಖಂಡರಾದ ರಾಮಣ್ಣ ತಳೇವಾಡ ಅವರ ಆಡಳಿತದಲ್ಲಿರುವ ಕಾರ್ಖಾನೆ ಕಾರ್ಮಿಕರು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರು. ರಾಮಣ್ಣ ತಳೇವಾಡ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ರಾಮಣ್ಣ ತಳೇವಾಡ ಅಭಿಮಾನಿಗಳು ಆಕ್ರೋಶಗೊಂಡು ಪ್ರತಿಭಟನಾನಿರತರಾಗಿದ್ದ ಟೆಂಟ್ಗೆ ಬೆಂಕಿ ಹಚ್ಚಿದ್ದಾರೆ.
ಈ ಹಿನ್ನೆಲೆಯಲ್ಲಿ ಘಟನೆಯನ್ನು ಖಂಡಿಸಿ ಮಾಜಿ ಸಚಿವರು ತಿಮ್ಮಾಪುರ ಅವರು ಪ್ರತಿಭಟನ ನಡೆಸಿದರು. ಪ್ರತಿಭಟನೆಗೆ ಪೊಲೀಸ್ ಅನುಮತಿ ಪಡೆಯದ ಕಾರಣ ಮತ್ತು ಏ. 22ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ಷೇತ್ರಕ್ಕೆ ಭೇಟಿ ನೀಡುವ ಕಾರಣ ಪ್ರತಿಭಟನಾಕಾರರನ್ನು ಬಂಧಿಸಲಾಯಿತು.
ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ನಗರದಲ್ಲಿ ಬಿಗಿ ಭದ್ರತೆ, ಪೊಲೀಸ್ ಪಥ ಸಂಚಲನ