ETV Bharat / state

ಗ್ರಾಪಂ ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ... ಅಧಿಕಾರಿಯ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆ

author img

By

Published : Jul 20, 2021, 2:15 AM IST

Updated : Jul 20, 2021, 9:45 AM IST

ಸ್ಥಳೀಯರ ಮತ್ತು ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಗ್ರಾಪಂ ಮಹಿಳಾ ಡಾಟಾ ಎಂಟ್ರಿ ಆಪರೇಟರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾಳೆ.

ಆತ್ಮಹತ್ಯೆ
ಆತ್ಮಹತ್ಯೆ

ಬಾಗಲಕೋಟೆ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಡಾಟಾ ಎಂಟ್ರಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಳೇದಗುಡ್ಡ ತಾಲೂಕಿನ ಹಳದೂರು ಗ್ರಾಮದಲ್ಲಿ ನಡೆದಿದೆ.

ಅನ್ನಕ್ಕ ಪಾದಗಟ್ಟಿ ಎಂಬ ಮಹಿಳಾ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡವರು. ಸ್ಥಳೀಯರ ಹಾಗೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತಿದ್ದ ಇವರು, ಪರಿಶೀಲನೆಗೆ ಬಂದ ಅಧಿಕಾರಿಯ ಮುಂದೆಯೇ ವಿಷ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಎರಡು ವರ್ಷಗಳಿಂದ ಮೇಲಾಧಿಕಾರಿ ಹಾಗೂ ಸ್ಥಳೀಯ ಮುಖಂಡರು ಕಿರುಕುಳ ನೀಡುತ್ತಿದ್ದರಂತೆ. ಈ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನ ಆಗಿರಲಿಲ್ಲವಂತೆ. ಇದರಿಂದ ಮಹಿಳಾ ಸಿಬ್ಬಂದಿ ಮನನೊಂದಿದ್ದರು. ಈ ಬಗ್ಗೆ ಪರಿಶೀಲಿಸಲು ಸೋಮವಾರ ಬಂದಿದ್ದ ಅಧಿಕಾರಿಯ ಮುಂದೆ, ಕಿರುಕುಳದ ಬಗ್ಗೆ ಮಾಹಿತಿ ನೀಡಿ ಅಲ್ಲೇ ವಿಷ ಸೇವಿಸಿದ್ದಾಳೆ. ಬಳಿಕ ತಕ್ಷಣವೇ ಆಕೆಯನ್ನು ಗುಳೇದಗುಡ್ಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾಳೆ.

ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೃತ ಮಹಿಳೆಯ ಸಂಬಂಧಿಕರು ಮತ್ತು ಗ್ರಾಪಂ ಸಿಬ್ಬಂದಿ ಆಸ್ಪತ್ರೆ ಎದುರು ಆಗ್ರಹಿಸಿದರು.

Last Updated : Jul 20, 2021, 9:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.