ETV Bharat / state

ಕುಸ್ತಿ ಪಂದ್ಯಾವಳಿ ನೋಡಲು ಮುಗಿಬಿದ್ದ ಜನ: ಕೋವಿಡ್​ ನಿಯಮ ಉಲ್ಲಂಘನೆ - mudhola Wrestling Tournament

ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕ್ಷೇತ್ರವಾದ ಮುಧೋಳದಲ್ಲಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಈ ವೇಳೆ ಕೊರೊನಾ​ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

Violation of the Covid rule in Wrestling Tournament
ಕುಸ್ತಿ ಪಂದ್ಯಾವಳಿಯಲ್ಲಿ ಕೋವಿಡ್​ ನಿಯಮ ಉಲ್ಲಂಘನೆ
author img

By

Published : Aug 14, 2021, 7:49 AM IST

ಬಾಗಲಕೋಟೆ: ಕೊರೊನಾದಿಂದ ಮೃತಪಟ್ಟಿರುವ ಬಿಜೆಪಿ ಮುಖಂಡರ ಸ್ಮರಣಾರ್ಥವಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಮುಧೋಳ ಪಟ್ಟಣದಲ್ಲಿ ಆಯೋಜನೆ ಮಾಡಲಾಗಿದ್ದು, ಈ ವೇಳೆ ಕೋವಿಡ್​ ನಿಯಮ ಉಲ್ಲಂಘಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಈಗಾಗಲೇ ಕೋವಿಡ್​-19 ಮೂರನೇ ಅಲೆಯ ಭೀತಿ ಉಂಟಾಗಿದೆ. ಈ ಬೆನ್ನಲ್ಲೇ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರ ಕ್ಷೇತ್ರ ಮುಧೋಳ ಪಟ್ಟಣದಲ್ಲಿ ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿರುವುದು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ.

ಕುಸ್ತಿ ಪಂದ್ಯಾವಳಿಯಲ್ಲಿ ಕೋವಿಡ್​ ನಿಯಮ ಉಲ್ಲಂಘನೆ

ಕುಸ್ತಿ ಪಂದ್ಯಾವಳಿ ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿದ್ದು, ಈ ವೇಳೆ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲಿಸದೆ ಮುಗಿಬಿದ್ದು ಪಂದ್ಯ ವೀಕ್ಷಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಮಹಾರಾಷ್ಟ್ರ, ದೆಹಲಿ ಸೇರಿದಂತೆ ಇತರೆ ಪ್ರದೇಶಗಳಿಂದ ಕುಸ್ತಿ ಪಟುಗಳು ಹಾಗೂ ಕೋಚ್​ಗಳನ್ನು ಕರೆಯಿಸಿ ಪಂದ್ಯ ಆಯೋಜಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಯಾವುದೇ ಮುನ್ನೆಚ್ಚರಿಕೆ ಕ್ರಮ ಇಲ್ಲದೆ ಕ್ರೀಡೆ ಆಯೋಜಿಸಿರುವುದು ಷ್ಟು ಸರಿ ಎಂಬ ಪ್ರಶ್ನೆ ಮೂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.