ಬಾಗಲಕೋಟೆ : ರಾಜ್ಯದಲ್ಲಿ ಎಲ್ಲಾ ಪಕ್ಷದಲ್ಲಿಯೂ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿರುವ ಸಮಯದಲ್ಲಿಯೇ, ಸ್ವಕ್ಷೇತ್ರ ಬಾದಾಮಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದು, ಅವರನ್ನ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ.
ಮಳೆಯ ಮಧ್ಯೆಯೇ ಹೂಮಳೆ ಸುರಿದ ಅಭಿಮಾನಿಗಳು, ಮುಂದಿನ ಸಿಎಂ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿರುವುದರಿಂದ ಹುಬ್ಬಳ್ಳಿ, ಸೋಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆಯುಂಟಾಗಿತ್ತು.
ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ನಲ್ಲಿ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆ, ಅಭಿಮಾನಿಗಳು ಮಳೆ ಮಧ್ಯೆಯೂ ಕೊಡೆ ಹಿಡಿದು ಸಿದ್ದರಾಮಯ್ಯರಿಗೆ ಹೂಮಳೆ ಸುರಿಸಿದರು. ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಅಭಿಮಾನಿಗಳು, ಮುಂದಿನ ಬಾರಿಯೂ ಬಾದಾಮಿಯಿಂದಲೇ ಸ್ಫರ್ಧೆ ಮಾಡುವಂತೆ ಮನವಿ ಮಾಡಿ ಸಿದ್ದರಾಮಯ್ಯ ಪರ ಜೈಕಾರ ಹಾಕಿದರು.
ಮಹಿಳೆಯರು ಡೊಳ್ಳು ಕುಣಿತದ ಮೂಲಕ ಅದ್ದೂರಿ ಸ್ವಾಗತ ನೀಡಿದರು. ಇನ್ನು, ಕಿಕ್ಕಿರಿದು ಸೇರಿದ್ದ ಜನರು ಮಾಸ್ಕ್ ಧರಿಸೋದು, ಸಾಮಾಜಿಕ ಅಂತರವನ್ನೇ ಮರೆತಿದ್ದರು.
ಇದನ್ನೂ ಓದಿ: ಚೆಂಡು ಉಮಾಪತಿ ಅಂಗಳದಲ್ಲಿದೆ, ಗೋಲು ಹೊಡೆಯುವುದು ಅವರಿಗೆ ಬಿಟ್ಟಿದ್ದು: 25 ಕೋಟಿ ವಂಚನೆ ಕೇಸ್ಗೆ ದಚ್ಚು ಕಿಡಿ