ಬಾಗಲಕೋಟೆ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ರಬಕವಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಂಗೀತಾ ಹರಿಜನ (36) ಕೊಲೆಯಾದವರು. ಕಳೆದ ರಾತ್ರಿ 9 ಗಂಟೆಗೆ ಬಹಿರ್ದೆಸೆಗೆ ಹೋಗಿದ್ದಾಗ ಘಟನೆ ನಡೆದಿದೆ.

ತಲೆ ಮತ್ತು ಕುತ್ತಿಗೆಗೆ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಜಯಪ್ರಕಾಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ವಿಶ್ವೇಶ್ವರಯ್ಯ ಕಾಲೇಜು ಅಧ್ಯಕ್ಷ ಪೊಲೀಸರ ವಶಕ್ಕೆ