ಬಾಗಲಕೋಟೆ: ಮಗನಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ತಿಳಿದು ವೃದ್ದೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಜಿಲ್ಲೆಯ ಜಮಖಂಡಿ ಪಟ್ಟಣದ ಕೊರೊನಾ ಸೋಂಕಿತ ವ್ಯಕ್ತಿಯ 70 ವರ್ಷದ ತಾಯಿ ಹೃದಯಾಘಾತದಿಂದ ಶನಿವಾರ ಸಂಜೆ ಮೃತಪಟ್ಟಿದ್ದಾರೆ. ಮೃತ ವೃದ್ಧೆಯಲ್ಲಿ ಯಾವುದೇ ರೀತಿಯ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಮಖಂಡಿ ತಾಲೂಕು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೊದಲೇ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧೆ, ಮಗನ ಬಗ್ಗೆ ಆತಂಕಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಜಿಲ್ಲಾಡಳಿತ ಕೋವಿಡ್ -19 ಪ್ರೊಟೋಕಾಲ್ ಪ್ರಕಾರ ಅಂತ್ಯ ಸಂಸ್ಕಾರ ನೆರೆವೇರಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.