ಬಾಗಲಕೋಟೆ: ವಿಶ್ವ ಪರಿಸರ ಸಂರಕ್ಷಣಾ ದಿನ ಹಾಗೂ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಶಾಸಕ ವೀರಣ್ಣ ಸಿ. ಚರಂತಿಮಠ ನವನಗರದಲ್ಲಿ ಗಿಡಗಳಿಗೆ ದೇಶಕ್ಕಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳ ಹೆಸರಿಟ್ಟು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಾರ್ಡ್ ನಂಬರ್ 7ರಲ್ಲಿ ಶ್ರೀ ರೇವಣಸಿದ್ದೇಶ್ವರ ಮಠದಲ್ಲಿ ನಗರಸಭೆ ಸದಸ್ಯರಾದ ಶ್ರೀಮತಿ ಶಶಿಕಲಾ ಸುರೇಶ್ ಮಜ್ಜಗಿ ಝಾನ್ಸಿ ರಾಣಿ ಲಕ್ಷ್ಮೀ ಬಾಯಿ ಎಂಬ ನಾಮಫಲಕ ಹಾಕಿ ಸಸಿ ನೆಟ್ಟರು.
ದೇಶದ ಮಹಾನ್ ವ್ಯಕ್ತಿಗಳಾದ ಸ್ವಾಮಿ ವಿವೇಕಾನಂದ, ಭಗತ್ ಸಿಂಗ್, ವೀರ ಸಾವರ್ಕರ್, ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀ ಬಾಯಿ, ಒನಕೆ ಓಬವ್ವ, ನೇತಾಜಿ ಸುಭಾಷ್ ಚಂದ್ರ ಬೋಸ್, ಶ್ರೀ ರೇವಣಸಿದ್ದೇಶ್ವರ, ಸಂಗೊಳ್ಳಿ ರಾಯಣ್ಣ, ಡಾ. ಎಪಿಜೆ ಅಬ್ದುಲ್ ಕಲಾಂ ಹೆಸರು ನಮೂದಿಸಿ ಸಸಿಗಳನ್ನು ನೆಡಲಾಯಿತು. ಈ ಮೂಲಕ ಪರಿಸರ ಬೆಳೆಸುವ ಜೊತೆಗೆ ದೇಶಕ್ಕಾಗಿ ಹೋರಾಟ ಮಾಡಿದ ಮಹಾನ್ ವ್ಯಕ್ತಿಗಳನ್ನು ಸ್ಮರಿಸುವ ಕಾರ್ಯ ಮಾಡಲಾಗಿದೆ.