ETV Bharat / state

ಯುವ ಮತದಾರರ ಹೆಸರು ಬಿಟ್ಟು ಹೋಗದಂತೆ ಕ್ರಮ ವಹಿಸಲು ಸೂಚನೆ - ಮತದಾರರ ಪಟ್ಟಿಯಲ್ಲಿ ಅಲೇಮಾರಿ ಜನಾಂಗ ಹಾಗೂ ಸುಡುಗಾಡು ಸಿದ್ದರು

ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಯುವ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕ ಮನೋಜ್ ಜೈನ್ ತಿಳಿಸಿದ್ದಾರೆ.

Kn_Bgk_03_Young_Voter_Av_Script_7202182
ಯುವ ಮತದಾರರು ಹೆಸರು ಬಿಟ್ಟು ಹೋಗದಂತೆ ಕ್ರಮ ವಹಿಸಿ: ಅಧಿಕಾರಿಗಳಿಗೆ ಮನೋಜ್ ಜೈನ್ ಸೂಚನೆ
author img

By

Published : Jan 25, 2020, 9:38 AM IST

ಬಾಗಲಕೋಟೆ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಯುವ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕ ಮನೋಜ್ ಜೈನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವ ಮತದಾರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆಯಾ ಬೂತ್ ಮಟ್ಟದ ಬಿಎಲ್ಓ (ಬೂತ್ ಲೆವೆಲ್ ಆಫೀಸರ್)ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಿ ಭೇಟಿ ನೀಡಿ ಪರಿಶೀಲಿಸುವ ಕಾರ್ಯವಾಗಬೇಕುರು. ಮತದಾರರ ಪಟ್ಟಿಯಲ್ಲಿ ಅಲೆಮಾರಿ ಜನಾಂಗ ಹಾಗೂ ಸುಡುಗಾಡು ಸಿದ್ದರು ಬಿಟ್ಟು ಹೋಗಬಾರದು. ಎಲ್ಲಾ ತಹಶೀಲ್ದಾರರು ಚುರುಕಾಗಿ ಕಾರ್ಯನಿರ್ವಹಿಸಿ ಮತದಾರರ ಪಟ್ಟಿ ಪರಿಷ್ಕರಣೆಗೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾಮಟ್ಟದಲ್ಲಿ ದಿನದ 24 ಗಂಟೆಗಳ ಕಂಟ್ರೋಲ್ ರೂಮ್ ತೆರೆದು, ಸ್ವೀಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡಬೇಕು. ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲು ಮನೋಜ್ ಜೈನ್ ತಿಳಿಸಿದರು. ಜಿಲ್ಲೆಯಲ್ಲಿ ಮಿಂಚಿನ ನೋಂದಣಿಯಲ್ಲಿ 18-19 ವಯಸ್ಸಿನ 5640 ಮತದಾರರು ಹೆಸರು ನೋಂದಾಯಿಸಿದ್ದಾರೆ. ಕಳೆದ ಡಿಸೆಂಬರ್ 16ರಿಂದ ಜನವರಿ 23ರವರೆಗೆ ಜಿಲ್ಲೆಯಲ್ಲಿ ಒಟ್ಟು 31880 ಅರ್ಜಿಗಳನ್ನು ಡಿಜಿಟಲೈಜ್ಡ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ತಿಳಿಸಿದರು.

Intro:AnchorBody:ಯಾವುದೇ ಯುವ ಮತದಾರರು ಬಿಟ್ಟು ಹೋಗದಂತೆ ಕ್ರಮ ವಹಿಸಿ : ಮನೋಜ್ ಜೈನ್

ಬಾಗಲಕೋಟೆ-- ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಯುವ ಮತದಾರರು ಬಿಟ್ಟು ಹೋಗದಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ಮತದಾರರ ಪಟ್ಟಿ ಪರಿಷ್ಕರಣೆ ವೀಕ್ಷಕ ಮನೋಜ್ ಜೈನ್ ತಿಳಿಸಿದರು.
         ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ಪರಿಷ್ಕರಣ ಕಾರ್ಯದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಯುವ ಮತದಾರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆಯಾ ಬೂತ್ ಮಟ್ಟದ ಬಿಎಲ್ಓಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಿ ಭೇಟಿ ನೀಡಿ ಪರಿಶೀಲಿಸುವ ಕಾರ್ಯವಾಗಬೇಕು ಎಂದರು.ಮತದಾರರ ಪಟ್ಟಿಯಲ್ಲಿ ಅಲೇಮಾರಿ ಜನಾಂಗ ಹಾಗೂ ಸುಡಗಾಡ ಸಿದ್ದರು ಬಿಟ್ಟು ಹೋಗಬಾರದು. ಎಲ್ಲ ತಹಶೀಲ್ದಾರರು ಚುರುಕಾಗಿ ಕಾರ್ಯನಿರ್ವಹಿಸಿ ಮತದಾರರ ಪಟ್ಟಿ ಪರಿಷ್ಕರಣೆಗೆ ಎಲ್ಲ ರೀತಿಯ ಕ್ರಮಕೈಗೊಳ್ಳಬೇಕು ಎಂದರು.
ಜಿಲ್ಲಾ ಮಟ್ಟದಲ್ಲಿ ದಿನ 24 ಗಂಟೆಗಳ ಕಂಟ್ರೋಲ್ ರೂಮ್ ತೆರೆಯಲು ತಿಳಿಸಿದರು. ಸ್ವೀಪ್ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡಬೇಕು. ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲು ಮನೋಜ್ ಜೈನ್ ತಿಳಿಸಿದರು.
ಜಿಲ್ಲೆಯಲ್ಲಿ ಮಿಂಚಿನ ನೋಂದಣಿಯಲ್ಲಿ 18-19 ವಯಸ್ಸಿನ 5640 ಮತದಾರರು ಹೆಸರು ನೋಂದಾಯಿಸಿದ್ದಾರೆ. ಕಳೆದ ಡಿಸೆಂಬರ್ 16 ರಿಂದ ನಿನ್ನೆ ಜನೇವರಿ 23 ರವರೆಗೆ ಜಿಲ್ಲೆಯಲ್ಲಿ ಒಟ್ಟು 31880 ಅರ್ಜಿಗಳನ್ನು ಡಜಿಟೈಜಡ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ. ರಾಜೇಂದ್ರ ತಿಳಿಸಿದರು.
ವಿವಿಧ ಹಂತದಲ್ಲಿ ಎಲ್ಲ ಅಧಿಕಾರಿಗಳು ಮತದಾರರ ಪಟ್ಟಿಯನ್ನು ಪರಿಶೀಲಿಸಿದ್ದಾರೆ. ಈವರೆಗೆ 3204 ಅರ್ಜಿಗಳನ್ನು ಪರಿಶೀಲಿಸಲಾಗಿದೆ. ಹೊಸ ಗುರುತಿನ ಚೀಟಿಯ ಮತ ಚೀಟಿಗಳನ್ನು ಮತದಾರರಿಗೆ ನೀಡಲಾಗುತ್ತಿದ್ದು, ಈವರೆಗೆ 42246 ಹೊಸ ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದರು. ಜಿಲ್ಲೆಯ 7 ಮತ ಕ್ಷೇತ್ರಗಳಲ್ಲಿ ಜನವರಿ 13ರ ಅಂತ್ಯಕ್ಕೆ ಹಕ್ಕು ಮತ್ತು ಆಕ್ಷೇಪಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಮೂನೆ-6ಕ್ಕೆ ಸಂಬಂಧಿಸಿದಂತೆ 26671, ಹೆಸರು ತೆಗೆದು ಹಾಕಲು ನಮೂನೆ-7ಕ್ಕೆ 6489, ಲೋಪದೋಷ ಸರಿಪಡಿಸಲು ನಮೂನೆ-8ಕ್ಕೆ 21753 ಹಾಗೂ ಅದೇ ವಿಧಾನ ಸಭೆ ಕ್ಷೇತ್ರದ ಒಂದು ಮತಗಟ್ಟೆಯಿಂದ ಬೆರೊಂದು ಮತಗಟ್ಟೆ ಸ್ಥಳಾಂತರಕೆ ನಮೂನೆ-8ಎಗೆ ಸಂಬಂಧಿಸಿದಂತೆ 3665 ಆಕ್ಷೇಪಣೆಯ ಅರ್ಜಿಗಳು ಬಂದಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹಾಗೂ ಪ್ರೋಬೆಷನರಿ ಐಎಎಸ್ ಅಧಿಕಾರಿ ಗರಿಮಾ ಪನ್ವಾರ ಸೇರಿದಂತೆ ಎಲ್ಲ ತಹಶೀಲ್ದಾರರು ಉಪಸ್ಥಿತರಿದ್ದರು.
Conclusion:ಈ ಟಿವಿ,ಭಾರತ,ಬಾಗಲಕೋಟೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.