ಬಾಗಲಕೋಟೆ: ಬ್ಲಾಕ್ ಇಟ್ಟಿಗೆ ತಯಾರಿಸುವ ಘಟಕದ ಯಂತ್ರಕ್ಕೆ ಸಿಲುಕಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದಲ್ಲಿ ನಡೆದಿದೆ.
ನಾಗನಗೌಡ ಎಂಬುವವರ ಸಿಮೆಂಟ್ ಬ್ಲಾಕ್ ಇಟ್ಟಿಗೆ ತಯಾರಿಸುವ ಘಟಕದಲ್ಲಿ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದ ಸುರೇಶ ಮಾದರ (19) ಎಂಬ ಯುವಕ ಯಂತ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಹಿನ್ನೆಲೆ ಮೃತಪಟ್ಟಿದ್ದು, ಈ ಬಗ್ಗೆ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗುತ್ತಿದೆ.