ಬೆಂಗಳೂರು: ಕೋವಿಡ್-19 ಸೋಂಕಿತ ಪ್ರಕರಣಗಳ ಮಹಾ ಸ್ಫೋಟವಾಗುತಿದ್ದು, ಜಿಲ್ಲೆಯಾದ್ಯಂತ ನಿನ್ನೆ 16 ಕೊರೊನಾ ಪ್ರಕರಣಗಳು ಕಂಡು ಬಂದಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿನ್ನೆ ದೇವನಹಳ್ಳಿ ತಾಲೂಕಿನಲ್ಲಿ 6, ಹೊಸಕೋಟೆ ತಾಲೂಕಿನಲ್ಲಿ 2, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 5 ಹಾಗೂ ನೆಲಮಂಗಲ ತಾಲೂಕಿನಲ್ಲಿ 3 ಪ್ರಕರಣಗಳು ವರದಿಯಾಗಿವೆ.
ಮುಂಬೈ ವಲಸೆ ಕಾರ್ಮಿಕರ ಆಗಮನದಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿವೆ. ನಿನ್ನೆ 16 ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 265ಕ್ಕೆ ತಲುಪಿದ್ದು, ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ಆತಂಕ ಮನೆ ಮಾಡಿದೆ. ಇದುವರೆಗೂ ಕೋವಿಡ್-19ಗೆ ಜಿಲ್ಲೆಯಲ್ಲಿ 7 ಮಂದಿ ಬಲಿಯಾಗಿದ್ದಾರೆ.