ಬೆಂಗಳೂರು: ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಕಾರ್ಯಕ್ರಮ ಉದ್ಘಾಟಿಸಿ ಉದ್ಯಮಿಗಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಪರ್ಯಾಯವಾಗಿ ನವೀಕರಣ ಇಂಧನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಲಿದೆ. ಪ್ರಮುಖವಾಗಿ ಹೈಡ್ರೋಜನ್ ಉದ್ಯಮದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, ಕಡಿಮೆ ದರದಲ್ಲಿ ಇಂಧನ ದೊರೆಯುವಂತೆ ಮಾಡಲು ಸಾಕಷ್ಟು ಸಂಶೋಧನೆ ನಡೆಯುತ್ತಿದೆ ಎಂದರು.
ಎಲೆಕ್ಟ್ರಿಕ್ ವಾಹನಗಳ ದರ ಕಡಿಮೆಯಾಗಲಿದೆ: ಮುಂದಿನ ಐದು ವರ್ಷಗಳಲ್ಲಿ ನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗಲಿದ್ದು, ಎಲೆಕ್ಟಿಕ್ ವಾಹನಗಳ ದರವೂ ಕಡಿಮೆಯಾಗಲಿದೆ ಎಂದರು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಖಾಸಗಿಯವರ ಪಾತ್ರವೂ ದೊಡ್ಡದಿದೆ. ಶಿಕ್ಷಣ ಸಂಸ್ಥೆಗಳು ಸರ್ಕಾರದೊಂದಿಗೆ ಸಹಯೋಗ ಮಾಡಿಕೊಂಡು ಕಾರ್ಯ ನಿರ್ವಹಿಸಬಹುದು ಎಂದು ತಿಳಿಸಿದರು.
ಭಾರತದಲ್ಲಿ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ, ಇಲ್ಲಿ ಉದ್ಯೋಗ ಸೃಷ್ಟಿಸುವುದು ದೊಡ್ಡ ಜವಾಬ್ದಾರಿ. ಮಾನವ ಸಂಪನ್ಮೂಲ ಹಾಗೂ ತಂತ್ರಜ್ಞಾನ ಹೊಂದಾಣಿಕೆ ಮಾಡಿಕೊಂಡು ಶಿಕ್ಷಣ ನೀಡುವ ವ್ಯವಸ್ಥೆಯಾಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಚಿಂತನೆ: ಸಿಎಂ ಬೊಮ್ಮಾಯಿ