ETV Bharat / state

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವಿರೋಧಿಸಿ ಕನ್ನಡ ಪರ ಸಂಘಟನೆಗಳಿಂದ ಕಪ್ಪು ಬಾವುಟ ಪ್ರದರ್ಶನ - ಜಿಲ್ಲಾ ಕಸಾಪ ಅಧ್ಯಕ್ಷ ಚಿ. ಮಾ. ಸುಧಾಕರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪಟ್ಟಣದ ಗಾಂಧಿಚೌಕದಲ್ಲಿ 23ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಈ ವೇಳೆ ಜಿಲ್ಲಾ ಕಸಾಪ ಅಧ್ಯಕ್ಷ ಚಿ. ಮಾ. ಸುಧಾಕರ್​ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆಂದು ಆರೋಪಿಸಿ ಅವರ ವಿರುದ್ಧ ಕನ್ನಡ ಪರ ಸಂಘಟನೆಗಳು ವೇದಿಕೆ ಮುಂದೆಯೇ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದವು.

Bangalore rural District
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ವಿರೋಧಿಸಿ ಕನ್ನಡ ಪರ ಸಂಘಟನೆಗಳಿಂದ ಕಪ್ಪು ಬಾವುಟ ಪ್ರದರ್ಶನ
author img

By

Published : Jan 3, 2021, 3:31 PM IST

ದೇವನಹಳ್ಳಿ : ಕೊರೊನಾ ಕಾರಣದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ 23 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ಸಮ್ಮೇಳನ ವಿರೋಧಿಸಿರುವ ಕನ್ನಡ ಪರ ಸಂಘಟನೆಗಳು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿವೆ.

22 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕಳೆದ ಮಾರ್ಚ್ ತಿಂಗಳಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿತ್ತು. ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಹೋರಾಟಗಾರ ತ.ನ.ಪ್ರಭುದೇವ್ ಆಯ್ಕೆಯಾಗಿದ್ದರು. ಆದರೆ ಕೊರೊನಾ ನೆಪದಲ್ಲಿ 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಿರಲಿಲ್ಲ. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ ಚಿ.ಮಾ. ಸುಧಾಕರ್ ಏಕಾಏಕಿ 23 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಆಯೋಜನೆ ಮಾಡಿದ್ದಾರೆ. ಜಿಲ್ಲಾ ಕಸಾಪ ಪದಾಧಿಕಾರಿಗಳ ಗಮನಕ್ಕೂ ತರದೇ ಏಕಪಕ್ಷೀಯ ತೀರ್ಮಾನದಂತೆ ಚಿ.ಮಾ.ಸುಧಾಕರ್ ವಿಜಯಪುರದಲ್ಲಿ 23 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿದ್ದಾರೆ.

ಇಂದು ವಿಜಯಪುರ ಪಟ್ಟಣದ ಗಾಂಧಿಚೌಕದಲ್ಲಿ 23 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ಚಿ. ಮಾ. ಸುಧಾಕರ್​ ಸರ್ವಾಧಿಕಾರಿ ಧೋರಣೆ ವಿರುದ್ಧ ಕನ್ನಡ ಪರ ಸಂಘಟನೆಗಳು ವೇದಿಕೆ ಮುಂದೆಯೇ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿವೆ. ಸುಧಾಕರ್ ಅವರು 22 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಿಡುಗಡೆಯಾದ 5 ಲಕ್ಷ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಅದರ ಲೆಕ್ಕ ಕೊಡದೆ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಹಿತ್ಯ ಪರಿಷತ್ತಿನ ಪ್ರಕಾರ 22 ನೇ ಸಮ್ಮೇಳನದ ಅಧ್ಯಕ್ಷರು 23 ಸಮ್ಮೇಳನದ ಅಧ್ಯಕ್ಷರಿಗೆ ಸಮ್ಮೇಳನದ ಧ್ವಜ ಹಸ್ತಾಂತರ ಮಾಡುವುದು ಶಿಷ್ಟಾಚಾರ. ಅದನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ದೊಡ್ಡಬಳ್ಳಾಪುರದ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.