ETV Bharat / state

ದೊಡ್ಡಬಳ್ಳಾಪುರದಲ್ಲಿ ರಸ್ತೆ ದಾಟುತ್ತಿದ್ದಾಗ ಅಜ್ಜಿ ಕೈಯಿಂದ ತಪ್ಪಿಸಿಕೊಂಡು ಓಡಿ ಹೋದ ಬಾಲಕ: ಟ್ರ್ಯಾಕ್ಟರ್​ಗೆ ಸಿಲುಕಿ ದಾರುಣ ಸಾವು

author img

By ETV Bharat Karnataka Team

Published : Sep 7, 2023, 10:19 AM IST

ದೊಡ್ಡಬಳ್ಳಾಪುರದಲ್ಲಿ ರಸ್ತೆ ದಾಟುತ್ತಿದ್ದಾಗ ಅಜ್ಜಿಯ ಕೈಯಿಂದ ತಪ್ಪಿಸಿಕೊಂಡು ಓಡಿ ಹೋದ 3 ವರ್ಷದ ಬಾಲಕ ಟ್ರ್ಯಾಕ್ಟರ್​ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

accident
ಅಪಘಾತ

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ) : ಮೂರು ವರ್ಷದ ಮೊಮ್ಮಗನ ಕೈ ಹಿಡಿದು ವೃದ್ಧೆಯೊಬ್ಬರು ರಸ್ತೆ ದಾಟುತ್ತಿದ್ದಾಗ ಅಜ್ಜಿಯ ಕೈಯಿಂದ ತಪ್ಪಿಸಿಕೊಂಡು ಓಡಿಹೋದ ಬಾಲಕ ಟ್ರ್ಯಾಕ್ಟರ್​ಗೆ ಸಿಲುಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.

ಹರೀಶ್ ಸಿಂಗ್ ಮತ್ತು ದೀಪಿಕಾ ರಾಣಿ ದಂಪತಿಯ ಮೂರು ವರ್ಷದ ಮಗ ದರ್ಶನ್ ಸಾವನ್ನಪ್ಪಿದ್ದಾನೆ. ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದ ಹರೀಶ್, ನಗರದ ದರ್ಜಿಪೇಟೆಯಲ್ಲಿ ವಾಸವಾಗಿದ್ದರು. ಅಜ್ಜಿ ಕಮಲೇಶ್ ದೇವಿ ಮೊಮ್ಮಗನ ಕೈಹಿಡಿದು ರಸ್ತೆ ದಾಟುತ್ತಿದ್ದರು. ಈ ವೇಳೆ ದರ್ಶನ್ ಅಜ್ಜಿಯ ಕೈಯಿಂದ ತಪ್ಪಿಸಿಕೊಂಡು ಓಡಲು ಪ್ರಾರಂಭಿಸಿದ್ದಾನೆ. ಇದೇ ಸಮಯಕ್ಕೆ ಟ್ರ್ಯಾಕ್ಟರ್ ಬಂದಿದ್ದು, ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡಿದ್ದ.

ಘಟನೆಯಲ್ಲಿ ಅಜ್ಜಿಗೂ ಗಾಯವಾಗಿದ್ದು, ಇಬ್ಬರನ್ನು ನಗರದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಬಾಲಕ ಸಾವನ್ನಪ್ಪಿದ್ದಾನೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ.. ಬಾಲಕ ಸೇರಿ ನಾಲ್ವರು ಸಾವು, ಮೂವರಿಗೆ ಗಾಯ

ಕಳೆದ ಮೂರು ದಿನಗಳ ಹಿಂದೆ ಚಿತ್ರದುರ್ಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತವು ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಸಂಭವಿಸಿತ್ತು. ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಶಂಶುದ್ದೀನ್ (40), ಮಲ್ಲಿಕಾ (37), ಖಲೀಲ್ (42) ಮತ್ತು ತಬ್ರೇಜ್ (13). ಗಂಭೀರವಾಗಿ ಗಾಯಗೊಂಡಿದ್ದ ನರ್ಗೀಸ್, ರೆಹಾನ್, ರೆಹಮಾನ್​ರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಎಸ್ಪಿ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದರು. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Accident : ಟ್ರಕ್- ಕಾರು ನಡುವೆ ಮುಖಾಮುಖಿ ಡಿಕ್ಕಿ.. 7 ಜನರು ಸಾವು, 12 ಮಂದಿಗೆ ಗಾಯ

ಇನ್ನು ಅಸ್ಸೋಂನ ತಿನ್‌ಸುಕಿಯಾ ಜಿಲ್ಲೆಯ ಕಾಕ್‌ಪಥರ್‌ನ ಬೋರ್-ಡಿರಾಕ್​ದಲ್ಲಿ ಮಂಗಳವಾರ ರಾತ್ರಿ 10.30 ರ ಸುಮಾರಿಗೆ ಟ್ರಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದು, ಇವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದರು. ಗಾಯಗೊಂಡವರನ್ನು ತಿನ್ಸುಕಿಯಾ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚುವರಿ ಚಿಕಿತ್ಸೆಗಾಗಿ ದಿಬ್ರುಗಢ ಅಸ್ಸೋಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ : Accident : ಪಿಲಿಭಿತ್​​​ನಲ್ಲಿ ಭೀಕರ ರಸ್ತೆ ಅಪಘಾತ.. ಮೂವರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.