ದೇವನಹಳ್ಳಿ: ಪಟ್ಟಣದ ಜೂನಿಯರ್ ಕಾಲೇಜ್ನಲ್ಲಿ ನಡೆದ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಂದಾಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಭಾಗಿಯಾಗಿದ್ದರು.
ಮಕ್ಕಳೊಂದಿಗೆ ಧ್ವಜಾರೋಹಣ ನೆರವೇರಿಸಿದ ಸಚಿವರು ಪೊಲೀಸ್ ತುಕಡಿಗಳು ಮತ್ತು ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.