ETV Bharat / state

ಹೈ-ಕ ಭಾಗದಲ್ಲಿ ಮನೆ ಮಾಡಿದ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ - ಕಲಬುರಗಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಂದು 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಹೈದರಾಬಾದ್​-ಕರ್ನಾಟಕ ಭಾಗದಲ್ಲೂ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ.

hyderabad-karnataka
ಹೈದರಾಬಾದ್​-ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ
author img

By

Published : Aug 15, 2021, 11:28 AM IST

Updated : Aug 15, 2021, 11:43 AM IST

ದೇಶದೆಲ್ಲೆಡೆ ಇಂದು 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದೆ. ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಹೈದರಾಬಾದ್​-ಕರ್ನಾಟಕ ಭಾಗದಲ್ಲೂ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ.

ಕಲಬುರಗಿ: ಬಿಸಿಲೂರು ಕಲಬುರಗಿ ಜಿಲ್ಲೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಭಾಗಿಯಾಗಿ ಧ್ವಜಾರೋಹಣ ನೆರವೇರಿಸಿದರು.

ಹೈದರಾಬಾದ್​-ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯೋತ್ಸವದ ಸಂಭ್ರಮ

ಬೀದರ್​ನಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿದ ಸಮಾರಂಭದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್​ ಧ್ವಜಾರೋಹಣ ನೆರವೇರಿಸಿದರು.

ಕೊಪ್ಪಳದಲ್ಲಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿದರು.

ರಾಯಚೂರು ಜಿಲ್ಲೆಯಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿಯಾಗಿ ಆಚರಿಸಲಾಗಿದೆ. ನಗರದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವರಿ ಸಚಿವ ವಿ.ಸೋಮಣ್ಣ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆಯ ಧ್ವಜ ವಂದನೆ ಸ್ವೀಕರಿಸಿ, ಸಾರ್ವಜನಿಕರಿಗೆ ಶುಭಾಶಯ ಕೋರಿದರು.

Last Updated : Aug 15, 2021, 11:43 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.