ನೆಲಮಂಗಲ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಮಹದೇವಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.
ಮೃತಪಟ್ಟವರನ್ನು ಟಿ.ದಾಸರಹಳ್ಳಿಯ ವೆಂಕಟೇಶ್(35) ಹಾಗೂ ಇನ್ನೋರ್ವ ಯುವತಿ ಎಂದು ಗುರುತಿಸಲಾಗಿದೆ. ದೇಹಗಳನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.