ETV Bharat / state

ಕೆಎಸ್ಆರ್‌ಟಿಸಿ ಬಸ್-ಲಾರಿ ನಡುವೆ ಭೀಕರ ಅಪಘಾತ: ದಂಪತಿ ಸಾವು, 20 ಮಂದಿ ಪ್ರಯಾಣಿಕರಿಗೆ ಗಾಯ - ಹೊಸಕೋಟೆಯಲ್ಲಿ ಅಪಘಾತ

ಕೆಎಸ್​​ಆರ್​​ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು(ದಂಪತಿ) ಮೃತಪಟ್ಟಿದ್ದಾರೆ. ಹೊಸಕೋಟೆಯ ಮೈಲಾಪುರ ಗೇಟ್ ಬಳಿ ಈ ದುರ್ಘಟನೆ ನಡೆದಿದೆ.

Accident in Hoskote
ಕೆಎಸ್​​ಆರ್​​ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ
author img

By

Published : Oct 3, 2022, 10:01 AM IST

Updated : Oct 3, 2022, 2:13 PM IST

ಹೊಸಕೋಟೆ(ಬೆಂಗಳೂರು ಗ್ರಾಮಾಂತರ): ಕೆಎಸ್​​ಆರ್​​ಟಿಸಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ದಂಪತಿ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೊಸಕೋಟೆಯ ಮೈಲಾಪುರ ಗೇಟ್ ಬಳಿ ಈ ದುರ್ಘಟನೆ ನಡೆದಿದೆ.

ಕೆಎಸ್ಆರ್‌ಟಿಸಿ ಬಸ್-ಲಾರಿ ನಡುವೆ ಭೀಕರ ಅಪಘಾತ

ರಸ್ತೆ ಬದಿಯಲ್ಲಿ ನಿಲ್ಲಿಸಿದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್​​ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿತ್ತೂರು ಮೂಲದ ಬಾಲಮುರುಗನ್(45) ಹಾಗೂ ಸೆಲ್ವಿ (36) ದಂಪತಿ ಸಾವನ್ನಪ್ಪಿದ್ದಾರೆ. ಇವರ ನಾಲ್ಕು ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಭಾನುವಾರ ರಾತ್ರಿ 9:30ಕ್ಕೆ ಆಂಧ್ರ ಪ್ರದೇಶದ ಬಲಿಜಖಂಡ್ರಿಗದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ತಡ ರಾತ್ರಿ 1:45ರ ಸಮಯಕ್ಕೆ ರಾಷ್ಟ್ರೀಯ ಹೆದ್ದಾರಿ ಹೊಸಕೋಟೆ ಸಮೀಪದ ಮೈಲಾಪುರ ಗೇಟ್ ಬಳಿ ಕಲ್ಲು ತುಂಬಿದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗ್ತಿದೆ.

Accident in Hoskote
ಕೆಎಸ್ಆರ್‌ಟಿಸಿ ಬಸ್-ಲಾರಿ ನಡುವೆ ಭೀಕರ ಅಪಘಾತ

ಅಪಘಾತ ಸಂಭವಿಸಿದ ತಕ್ಷಣ ಚಾಲಕ ಬಸ್​​ ಬಿಟ್ಟು ಪರಾರಿಯಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿ ಮತ್ತು ಹೊಸಕೋಟೆ ಠಾಣೆ ಇನ್ಸ್​​ಪೆಕ್ಟರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: 6 ವರ್ಷದ ಬಾಲಕನ ತಲೆ ಕಡಿದು ಬಲಿ ನೀಡಿದ ಕೀಚಕರು.. ಇದು ದೈವಾದೇಶವಂತೆ!

Last Updated : Oct 3, 2022, 2:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.