ದೊಡ್ಡಬಳ್ಳಾಪುರ: ಪೆಟ್ರೋಲ್ ಬಂಕ್ನಿಂದ ರಸ್ತೆಗೆ ಬಂದ ಬೈಕ್ ಸವಾರ ಹೆದ್ದಾರಿಯಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೊರ ವಲಯದ ಪಾಲಿನ ಜೋಗಹಳ್ಳಿ ಬಳಿಯ ಹಿಂದೂಪುರ-ಯಲಹಂಕ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ದೇವರಾಜ್ (30) ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿ ಚಿಕ್ಕಬಳ್ಳಾಪುರ ತಾಲೂಕಿನ ಎನ್. ಹೊಸೂರು ನಿವಾಸಿ. ಆದ್ರೆ ಆರೋಪಿ ಮಾತ್ರ ಘಟನೆಯ ನಂತರ ಕಾರನ್ನ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.