ETV Bharat / state

ಅಧಿಕಾರಿಗಳಿಂದ ಹಣ ವಸೂಲಿ ಸಾಬೀತಾದರೆ ರಾಜಕೀಯದಿಂದ ನಿವೃತ್ತಿ: ಬಿಜೆಪಿ ತಿರುಗೇಟು - ಶಾಸಕ ನಿಸರ್ಗ ನಾರಾಯಣ ಸ್ವಾಮಿ ಆರೋಪ

ಮೋದಿ ಸಮಾವೇಶಕ್ಕೆ ಅಧಿಕಾರಿಗಳಿಂದ ಹಣ ವಸೂಲಿ ಎಂಬ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಆರೋಪಕ್ಕೆ ಬಿಜೆಪಿ ಮಾಜಿ ಶಾಸಕ ಪಿಳ್ಳ ಮುನಿಶ್ಯಾಮಪ್ಪ ತಿರುಗೇಟು

Former BJP MLA Pillai Munishyampa
ಬಿಜೆಪಿ ಮಾಜಿ ಶಾಸಕ ಪಿಳ್ಳ ಮುನಿಶ್ಯಾಮಪ್ಪ
author img

By

Published : Nov 17, 2022, 6:52 PM IST

ದೇವನಹಳ್ಳಿ: ಮೋದಿ ಸಮಾವೇಶಕ್ಕೆ ಅಧಿಕಾರಿಗಳಿಂದ ಹಣ ವಸೂಲಿ ಎಂಬ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಆರೋಪಕ್ಕೆ ಬಿಜೆಪಿ ಮಾಜಿ ಶಾಸಕ ಪಿಳ್ಳ ಮುನಿಶ್ಯಾಮಪ್ಪ ತಿರುಗೇಟು ನೀಡಿದ್ದಾರೆ.

ದೇವನಹಳ್ಳಿ ಪಟ್ಟಣದಲ್ಲಿ ಪಿಳ್ಳ ಮುನಿಶ್ಯಾಮಪ್ಪ ಮಾತನಾಡಿ, ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಅವರು ಅಧಿಕಾರಿಗಳಿಂದ ಹಣ ವಸೂಲಿ ಮಾಡಲಾಗಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ ಅವರು, ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವುದು ಸಾಬೀತು ಮಾಡಿದ್ದಲ್ಲಿ ನಾವು ರಾಜಕೀಯದಿಂದ ನಿವೃತ್ತಿಯಾಗುವೆ ಎಂದು ಸವಾಲು ಹಾಕಿದ್ದಾರೆ.

ಇದಕ್ಕಾಗಿ ನಾವು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ಧ, ನೀವು ಸಿದ್ಧರಾಗಿದ್ದೀರಾ ಎಂದು ಪ್ರತಿ ಚಾಲೇಂಜ್​​ ಹಾಕಿದ್ದಾರೆ. ಶಾಸಕರೇ ಅಧಿಕಾರಿಗಳಿಂದ ಕಮಿಷನ್ ಪಡೆದುಕೊಳ್ಳುತ್ತಿದ್ದಾರೆ ಎಂದು ಪ್ರತ್ಯಾರೋಪ ಮಾಡಿದರು. ಮಾಜಿ ಶಾಸಕ ಪಿಳ್ಳ ಮುನಿಶ್ಯಾಮಪ್ಪ ಜತೆ ಬಿಜೆಪಿ ಜಿಲ್ಲಾಧ್ಯಕ್ಷ ನಾರಾಯಣಸ್ವಾಮಿ, ಮುಖಂಡ ನಾಗೇಶ್ ಹಾಜರಿದ್ದರು.

ಇದನ್ನೂ ಓದಿ:ವರುಣದಿಂದ ಟಿಕೆಟ್ ಬಯಸಿ ಯತೀಂದ್ರ ಅರ್ಜಿ: ಸಿದ್ದರಾಮಯ್ಯ ನಡೆಯದ್ದೇ ಕುತೂಹಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.