ETV Bharat / state

ನಾಳೆ ದೇವನಹಳ್ಳಿಗೆ ಅಮಿತ್ ಷಾ ಭೇಟಿ: ಪೊಲೀಸರಿಂದ ಸ್ಥಳ ಪರಿಶೀಲನೆ - ಅಮಿತ್​ ಶಾ ರಾಜ್ಯ ಪ್ರವಾಸ

ಬಿಜೆಪಿ ವರಿಷ್ಠ ನಾಯಕರಾದ ಅಮಿತ್​ ಶಾ ಅವರು ನಾಳೆ ದೇವನಹಳ್ಳಿಯಲ್ಲಿ ಪಾಲ್ಗೊಳ್ಳಲಿರುವ ಕಾರ್ಯಕ್ರಮದ ಸ್ಥಳ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಪೊಲೀಸ್​ ಅಧಿಕಾರಿಗಳು ಪರಿಶೀಲನೆ ನಡೆಸಿದರು.

amit-shah-visit-devanahalli-tomorrow
ಪೊಲೀಸ್​ ಅಧಿಕಾರಿಗಳಿಂದ ಭದ್ರತಾ ಸ್ಥಳ ಪರಿಶೀಲನೆ
author img

By

Published : Dec 30, 2022, 8:29 PM IST

ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ

ದೇವನಹಳ್ಳಿ(ಬೆಂಗಳೂರು): ತಾಲೂಕಿನ ಆವತಿ ಗ್ರಾಮ ಹಾಗೂ ಅನಂತ ವಿದ್ಯಾನಿಕೇತನ ಶಾಲೆಯ ಆವರಣದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಭಾಗವಹಿಸುವ ಕಾರ್ಯಕ್ರಮಗಳ ಸಿದ್ಧತೆ ಬಹುತೇಕ ಪೂರ್ಣಗೊಂಡಿದೆ. ಪೊಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದ ಸ್ಥಳಗಳು ಹಾಗೂ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದರು.

ನಾಳೆ ಬೆಳಗ್ಗೆ 11 ಗಂಟೆಗೆ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೊಲೀಸ್ ರೀಸರ್ಚ್ ಅಂಡ್ ಡೆವಲಪ್‌ಮೆಂಟ್ (ಬಿ.ಪಿ.ಆರ್.ಡಿ.)ಸಂಸ್ಥೆಯಡಿ ಕಾರ್ಯನಿರ್ವಹಿಸುವ ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ ನೆರವೇರಲಿದೆ. ಬೆಂಗಳೂರಿನ ಸೆಂಟ್ರಲ್ ಡಿಟೆಕ್ಟಿವ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ (ಸಿಡಿಟಿಐ) ಸಂಸ್ಥೆಯನ್ನು ಅರ್ಬನ್ ಪೊಲೀಸಿಂಗ್ (ಸ್ಮಾರ್ಟ್ ಸಿಟಿ ಪೊಲೀಸಿಂಗ್) ಹಾಗೂ ಬ್ಲಾಕ್ ಚೈನ್ ತಂತ್ರಜ್ಞಾನದ ಉತ್ಕೃಷ್ಟತಾ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುತ್ತಿದೆ.

ಈ ಕೇಂದ್ರದಲ್ಲಿ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು, ಸಿಪಿಓಗಳು ಹಾಗೂ ಸಿಎಪಿಎಫ್‌ಗಳ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಕೋರ್ಸ್‌ಗಳನ್ನು ನೀಡಲು ರೂಪಿಸಲಾಗಿದೆ. ಪೊಲೀಸ್ ಅಧಿಕಾರಿಗಳ ತನಿಖಾ ಗುಣಮಟ್ಟವನ್ನು ಸುಧಾರಿಸುವುದು ಇದರ ಪ್ರಮುಖ ಉದ್ದೇಶ. ಆವತಿ ಗ್ರಾಮದಲ್ಲಿ ಈ ಕೇಂದ್ರಕ್ಕಾಗಿ ರಾಜ್ಯ ಸರ್ಕಾರ 35 ಎಕರೆ ಭೂಮಿ ಒದಗಿಸಿದೆ.

ಆವತಿಯಲ್ಲಿ ಭೂಮಿಪೂಜೆ ಕಾರ್ಯಕ್ರಮದ ನಂತರ ಚಿಕ್ಕಬಳ್ಳಾಪುರ ರಸ್ತೆಯ ಅತ್ತಿಬೆಲೆ ಗ್ರಾಮದ ಸಮೀಪದ ಅನಂತ ವಿದ್ಯಾನಿಕೇತನ ಶಾಲೆ ಆವರಣದಲ್ಲಿ ಹಮ್ಮಿಕೊಂಡಿರುವ ವರ್ಚುವಲ್ ಕಾರ್ಯಕ್ರಮದ ಮೂಲಕ ಬೆಂಗಳೂರಿನಲ್ಲಿರುವ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪ್ರಾದೇಶಿಕ ಪ್ರಧಾನ ಕಛೇರಿಯ ಹಲವು ಯೋಜನೆಗಳನ್ನು ಅಮಿತ್​ ಶಾ ಉದ್ಘಾಟಿಸುವರು. 120 ಸೈನಿಕರ ಬ್ಯಾರಕ್‌ಗಳು, 42 ವಸತಿ ಕಟ್ಟಡಗಳು, ಜಂಟಿ ಆಡಳಿತಾತ್ಮಕ ಕಟ್ಟಡಗಳು, ಅಧಿಕಾರಿಗಳ ಹಾಗೂ ಅಧೀನ ಅಧಿಕಾರಿಗಳ ಮೆಸ್ ಆನ್‌ಲೈನ್ ಮೂಲಕ ಉದ್ಘಾಟನೆಗೊಳ್ಳಲಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ, ಭಾರತ-ಟಿಬೆಟ್ ಗಡಿ ಪೊಲೀಸ್ ಮಹಾನಿರ್ದೇಶಕ ಅನೀಶ್ ದಯಾಳ್ ಮತ್ತಿತರ ಗಣ್ಯರು ಮತ್ತು ಆಹ್ವಾನಿತರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಭದ್ರತೆಗೆ 500 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಇಬ್ಬರು ಎಸ್ಪಿ, ಒಬ್ಬರು ಎಎಸ್ಪಿ, ಹತ್ತು ಮಂದಿ ಡಿವೈಎಸ್ಪಿಗಳನ್ನು ಕಾರ್ಯಕ್ರಮದ ಭದ್ರತೆಗೆ ನಿಯೋಜಿಸಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಇದನ್ನೂ ಓದಿ: ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿಸುವಂತೆ ಅಮಿತ್ ಶಾ ಕರೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.