ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ರೈಲ್ವೆ ಮೇಲ್ಸೇತುವೆ ಕಳಪೆ ಕಾಮಗಾರಿಯಿಂದ ನಿರ್ಮಿತವಾಗದ್ದು, ಇದೀಗ ಮತ್ತೆ ಶಾಲಾ ಬಸ್ಸೊಂದು ಫುಟ್ಪಾತ್ಗೆ ನುಗ್ಗಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆಯ ಲಿಟ್ಲ್ ಮಾಸ್ಟರ್ ಆಂಗ್ಲ ಶಾಲೆಯ ವಾಹನವು ಶಾಲೆಯಿಂದ ಮಕ್ಕಳನ್ನು ಮನೆಗೆ ಬಿಟ್ಟು ವಾಪಸ್ ಬರುವಾಗ ಈ ಘಟನೆ ನಡೆದಿದೆ. ಬಾಶೆಟ್ಟಿಹಳ್ಳಿ ಬಳಿಯ ರೈಲ್ವೆ ಮೇಲ್ಸೇತುವೆ ಮೇಲೆ ವೇಗವಾಗಿ ಬರುವಾಗ ಹಂಪ್ ಅಡ್ಡಿಯಾಯ್ತು ನಿಯಂತ್ರಣ ಕಳೆದುಕೊಂಡು ಚಾಲಕ ಫುಟ್ಪಾತ್ಗೆ ಗುದ್ದಿದ್ದ ರಭಸಕ್ಕೆ ಶಾಲಾ ವಾಹನದ ಮುಂಭಾಗ ಜಖಂಗೊಂಡಿದೆ. ಅದೃಷ್ಟಕ್ಕೆ ವಾಹನದಲ್ಲಿ ಮಕ್ಕಳು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.
ಘಟನೆಗೆ ಅವೈಜ್ಞಾನಿಕವಾಗಿ ರೈಲ್ವೆ ಮೇಲ್ಸೇತುವೆ ಮೇಲೆ ಹಾಕಲಾಗಿರುವ ಹಂಪ್ ಕಾರಣವಾಗಿದೆ ಎನ್ನುವುದು ಸಾರ್ವಜನಿಕರ ಆರೋಪ. ಈ ಹಿಂದೆ ರೈಲ್ವೆ ಮೇಲ್ಸೇತುವೆಯ ತಡೆಗೋಡೆಗಳು ಕಳಚಿ ಬಿದ್ದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.