ನೆಲಮಂಗಲ : ದರೋಡೆಗೆ ಹೊಂಚು ಹಾಕುತ್ತಿದ್ದ 6 ದರೋಡೆಕೋರರನ್ನ ಬಂಧಿಸುವಲ್ಲಿ ಮಾದನಾಯಕನಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚೋಹಳ್ಳಿ- ಬೈಯಂಡಹಳ್ಳಿ ರಸ್ತೆಯ ಮುನೇಶ್ವರ ದೇವಸ್ಥಾನದ ಬಳಿ , ಕೈಯಲ್ಲಿ ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ಗ್ಯಾಂಗ್ ಬಗ್ಗೆ ಮಾಹಿತಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, 6 ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳು ದಿಲೀಪ್ ಕುಮಾರ್, ಬಾಲಾಜಿ .ಪಿ. ಮಂಜುನಾಥ್ ಕೆ, ಜಗದೀಶ್ ಅಲಿಯಾಸ್ ಪರಿವಾಳ ಜಗ್ಗ, ಮೈಲಾರಿ, ಅಭಿ ಅಲಿಯಾಸ್ ಲೋಹಿ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಂದು ಲಾಂಗ್,ಒಂದು ಚಾಕು, ಮೂರು ದೊಣ್ಣೆ, ಹಗ್ಗ , ಖಾರದ ಪುಡಿ, ಆಟೋವನ್ನ ವಶಪಡಿಸಿಕೊಳ್ಳಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.