ನೆಲಮಂಗಲ: ಹೆಲ್ಮೆಟ್ ಧರಿಸಿದ ದುಷ್ಕರ್ಮಿಗಳ ತಂಡ ಯುವಕನನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದು, ಈ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನೆಲಮಂಗಲ ಪಟ್ಟಣದ ಎಂ.ಜಿ ರಸ್ತೆಯ ವಾರಿಯರ್ ಬೇಕರಿ ಬಳಿ ನವೆಂಬರ್ 3ರ ತಡರಾತ್ರಿ 1 ಗಂಟೆಯ ಸಮಯದಲ್ಲಿ ಈ ಕೃತ್ಯ ನಡೆದಿದೆ. ಕೈಯಲ್ಲಿ ಲಾಂಗು ಮಚ್ಚು ಹಿಡಿದು ಹೆಲ್ಮೆಟ್ ಧರಿಸಿದ 6 ಜನ ದುಷ್ಕರ್ಮಿಗಳು ಏಕಾಏಕಿ ಬೇಕರಿ ಹಿಂಭಾಗದ ರೂಮ್ನಲ್ಲಿದ್ಧ ಯುವಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ನಂದನ್ (20) ಎಂಬ ಯುವಕ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದಾನೆ. ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಹಲ್ಲೆ ಮಾಡಲು ಬರುತ್ತಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನೆಲಮಂಗಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.