ETV Bharat / state

ಅಕ್ರಮ ಸಾಕಾಣಿಕೆ ಮಾಡುತ್ತಿದ್ದ ನಿಷೇಧಿತ ಕ್ಯಾಟ್ ಫಿಶ್ ಹೊಂಡಗಳ ಮೇಲೆ ಅಧಿಕಾರಿಗಳ ದಾಳಿ..

author img

By

Published : Dec 18, 2019, 8:33 PM IST

ಹೊಸಕೋಟೆ ತಾಲೂಕಿನ ಬೈಲಾನರಸಾಪುರ ಹಾಗೂ ಎನ್.ಹೊಸಹಳ್ಳಿ ಗ್ರಾಮಗಳಲ್ಲಿ ಅಕ್ರಮವಾಗಿ ಸಾಕಾಣಿಕೆ ಮಾಡುತ್ತಿದ್ದ ಕ್ಯಾಟ್ ಫಿಶ್ ಹೊಂಡಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಜೆಸಿಬಿ ಮೂಲಕ ತೆರವುಗೊಳಿಸಿದ್ದಾರೆ.

Cat Fish Pits
ಕ್ಯಾಟ್ ಫಿಶ್ ಹೊಂಡ

ಬೆಂಗಳೂರು: ರಾಜ್ಯಾದ್ಯಂತ ನಿಷೇಧ ಹೇರಿರುವ ಕ್ಯಾಟ್ ಫಿಶ್‌ಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡುತ್ತಿದ್ದ ಹೊಂಡಗಳ ಮೇಲೆ ಇಂದು ಅಧಿಕಾರಿಗಳು ದಾಳಿ ನಡೆಸಿ, ಜೆಸಿಬಿ ಮೂಲಕ ತೆರವುಗೊಳಿಸಿದ್ದಾರೆ.

ಕ್ಯಾಟ್ ಫಿಶ್ ಹೊಂಡಗಳ ಮೇಲೆ ಅಧಿಕಾರಿಗಳ ದಾಳಿ..

ಹೊಸಕೋಟೆ ತಾಲೂಕಿನ ಬೈಲಾನರಸಾಪುರ ಹಾಗೂ ಎನ್.ಹೊಸಹಳ್ಳಿ ಗ್ರಾಮಗಳಲ್ಲಿ ಅಕ್ರಮವಾಗಿ ಕ್ಯಾಟ್‌ಫಿಶ್ ಸಾಕಾಣಿಕೆ ಮಾಡುತ್ತಿದ್ದಾರೆ ಅನ್ನೋ ಖಚಿತ ಮಾಹಿತಿ ಮೇರೆಗೆ ಹೊಸಕೋಟೆ ತಾಲೂಕು ತಹಶೀಲ್ದಾರ್, ಮೀನುಗಾರಿಕೆ ಇಲಾಖೆ ಹಾಗೂ ನಂದಗುಡಿ ಪೊಲೀಸ್ ಇಲಾಖೆಯ ಅಧಿಕಾರಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಗ್ರಾಮಗಳಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಕ್ಯಾಟ್‌ ಫಿಶ್ ಸಾಕಾಣಿಕೆ ಮಾಡುತ್ತಿದ್ದರು. ಇವತ್ತು ಅಧಿಕಾರಿಗಳ ನೇತೃತ್ವದಲ್ಲಿ ಎರಡು ತಂಡಗಳಾಗಿ 2 ಜೆಸಿಬಿಗಳ ಮೂಲಕ ಕ್ಯಾಟ್ ಫಿಶ್ ಹೊಂಡಗಳನ್ನು ತೆರವು ಕಾರ್ಯಾಚರಣೆ ನಡೆಲಾಯ್ತು. ಈ ಹಿಂದೆಯೂ ಸಹ ಜಿಲ್ಲಾ ಪೊಲೀಸ್‌ ವರಿಷ್ಠ ರವಿ ಡಿ ಚನ್ನಣ್ಣನವರ್ ಅವರ ನೇತೃತ್ವದಲ್ಲಿ ತೆರವು ಗೊಳಿಸಲಾಗಿತ್ತು. ಈಗ ಮತ್ತೆ ಅಕ್ರಮ ಕ್ಯಾಟ್ ಫಿಶ್ ಸಾಕಾಣಿಕೆ ಪ್ರಾರಂಭಿಸಿದ್ದರ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಇದನ್ನಾಧರಿಸಿ ಅಧಿಕಾರಿಗಳು ದಾಳಿ ನಡೆಸಿ ಹೊಂಡಗಳನ್ನು ಧ್ವಂಸಗೊಳಿಸಿದ್ದಾರೆ.

ಇಂದು ದಿನಪೂರ್ತಿ ಅಧಿಕಾರಿಗಳ ತಂಡ ತೆರವು ಕಾರ್ಯಚರಣೆ ಮಾಡಿತು. ಎರಡು ಗ್ರಾಮಗಳಲ್ಲಿ ಸಂಪೂರ್ಣ ಕ್ಯಾಟ್ ಫಿಶ್ ಹೊಂಡಗಳನ್ನು ತೆರವುಗೊಳಿಸಿದರು. ಕ್ಯಾಟ್ ಫಿಶ್ ಸಾಕಾಣಿಕೆ ಹಾಗೂ ಹೊಂಡಗಳ ಜಾಗದ ಮಾಲೀಕರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

Intro:ಅಕ್ರಮವಾಗಿ ಸಾಕಾಣಿಕೆ ಮಾಡುತ್ತಿದ್ದ ನಿಷೇಧಿತ ಕ್ಯಾಟ್ ಫಿಶ್ ಹೊಂಡಗಳ ಮೇಲೆ ಅಧಿಕಾರಿಗಳ ದಾಳಿ....ಜೆಸಿಬಿ ಮೂಲಕ ತೆರವು ಕಾರ್ಯಚರಣೆ.

ರಾಜ್ಯಾದ್ಯಂತ ನಿಷೇಧ ಹೇರಿರುವ ಕ್ಯಾಟ್ ಫಿಶ್ ಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡುತ್ತಿದ್ದ ಹೊಂಡಗಳ ಮೇಲೆ ಇಂದು ಅಧಿಕಾರಿಗಳು ದಾಳಿ ನಡೆಸಿದ್ದು ಜೆಸಿಬಿ ಮೂಲಕ ತೆರವು ಗೊಳಿಸಿದ್ದಾರೆ....ಹೊಸಕೋಟೆ ತಾಲ್ಲೂಕಿನ ಬೈಲಾನರಸಾಪುರ ಹಾಗು ಎನ್.ಹೊಸಹಳ್ಳಿ ಗ್ರಾಮಗಳಲ್ಲಿ ಅಕ್ರಮವಾಗಿ ಕ್ಯಾಟ್ ಫಿಶ್ ಸಾಕಾಣಿಕೆ ಮಾಡುತ್ತಿದ್ದಾರೆ ಎನ್ನುವಂತ ಖಚಿತ ಮಾಹಿತಿ ಮೇರೆಗೆ ಹೊಸಕೋಟೆ ತಾಲ್ಲೂಕು ತಹಶೀಲ್ದಾರ್,ಮೀನುಗಾರಿಕೆ ಇಲಾಖೆ,ಹಾಗು ನಂದಗುಡಿ ಪೋಲಿಸ್ ಇಲಾಖೆಯ ಅಧಿಕಾರಿ ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ....

Body:ಗ್ರಾಮಗಳಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಕ್ಯಾಟ್ ಫಿಶ್ ಸಾಕಾಣಿಕೆ ಮಾಡುತ್ತಿದ್ದು ಎರಡು ತಂಡಗಳಾಗಿ 2 ಜೆಸಿಬಿಗಳ ಮೂಲಕ ಕ್ಯಾಟ್ ಫಿಶ್ ಹೊಂಡಗಳನ್ನು ತೆರವು ಕಾರ್ಯಚರಣೆ ನಡೆಲಾಗುತ್ತಿದ್ದು ಈ ಹಿಂದೆಯೂ ಸಹ ಜಿಲ್ಲಾ ಎಸ್ಪಿ ರವಿ ಚನ್ನಣ್ಣನವರ್ ಅವರ ನೇತೃತ್ವದಲ್ಲಿ ತೆರವು ಗೊಳಿಸಿದ್ರು ಸಹ ಮತ್ತೆ ಅಕ್ರಮವಾಗಿ ಕ್ಯಾಟ್ ಫಿಶ್ ಸಾಕಾಣಿಕೆ ಪ್ರಾರಂಭಿಸಿದ್ದ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಅಧಿಕಾರಿಗಳ ದಾಳಿ ನಡೆಸಿ ಹೊಂಡಗಳನ್ನು ಧ್ವಂಸಗೊಳಿಸಿದ್ದಾರೆ.

Conclusion:ಇಂದು ದಿನಪೂರ್ತಿ ಅಧಿಕಾರಿಗಳ ತಂಡ ತೆರವು ಕಾರ್ಯಚರಣೆ ಮಾಡಲಿದ್ದು ಎರಡು ಗ್ರಾಮಗಳಲ್ಲಿ ಸಂಪೂರ್ಣ ಕ್ಯಾಟ್ ಫಿಶ್ ಹೊಂಡಗಳನ್ನು ತೆರವು ಗೊಳಿಸಲಿದ್ದಾರೆ.ಕ್ಯಾಟ್ ಫಿಶ್ ಸಾಕಾಣಿಕೆ ಹಾಗು ಹೊಂಡಗಳ ಜಾಗದ ಮಾಲೀಕರ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಬೈಟ್‌: ಆಶಾ ಸುರೇಶ್, ಹೊಸಕೋಟೆ ತಹಶಿಲ್ದಾರ್.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.