ದೇವನಹಳ್ಳಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾಗೆ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎ.ಹರೀಶ್ ಚಾಲನೆ ನೀಡಿದರು.
ದೇವನಹಳ್ಳಿಯ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾಯಾಧೀಶರಾದ ಎ.ಹರೀಶ್ ಗಿಡಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಅಂಬೇಡ್ಕರ್ ಭವನದಿಂದ ವೇಣುಗೋಪಾಲಸ್ವಾಮಿ ದೇವಸ್ಥಾನದವರೆಗೂ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.
ಜಾಥಾ ಪ್ರಾರಂಭವಾಗುವುದಕ್ಕೂ ಮೊದಲು ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಹಾಗೇ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತದಾರರ ಪ್ರತಿಜ್ಞಾವಿಧಿ ಸ್ವೀಕರಿಸಿದರು. ನಂತರ ಜಿಲ್ಲೆಯ ನೂತನ ಯುವ ಮತದಾರರಿಗೆ ಎಪಿಕ್ ಕಾರ್ಡ್ ವಿತರಿಸಲಾಯಿತು. ಅನಂತರ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಚುನಾವಣೆ ಮತ್ತು ಮತದಾನಕ್ಕೆ ಸಂಬಂಧಿಸಿದಂತೆ ವಿವಿಧ ಸ್ಪರ್ಧೆಗಳನ್ನು ಅಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಚೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಸಹ ಮಾಡಲಾಯಿತು.