ETV Bharat / state

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ.. ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ..

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನೀತಿ ಸಂಹಿತೆ ಪಾಲಿಸುವ ಮೂಲಕ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಉಪ ಚುನಾವಣೆ ಹಿನ್ನೆಲೆ..ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ
author img

By

Published : Sep 22, 2019, 7:53 PM IST

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ರಾಜಕೀಯ ಪಕ್ಷಗಳು ನೀತಿ ಸಂಹಿತೆ ಪಾಲಿಸುವ ಮೂಲಕ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ತಿಳಿಸಿದ್ದಾರೆ.

Background of Hosakote by election: Enforcement strict Code of Conduct  throughout the district
ಹೊಸಕೋಟೆ ವಿಧಾನಸಭಾ ಕ್ಷೇತ್ರದಉಪ ಚುನಾವಣೆ ಹಿನ್ನೆಲೆ..ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಅನುಮತಿ ಇಲ್ಲದೇ ರಾಜಕೀಯ ಪಕ್ಷಗಳು ಕಾರ್ಯಕ್ರಮ ಮಾಡುವಂತಿಲ್ಲ. ರಾಜಕೀಯ ಪಕ್ಷಗಳು ಏರ್ಪಡಿಸುವ ಸಭೆ, ವೇದಿಕೆ ಕಾರ್ಯಕ್ರಮಗಳು, ರ್ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಪೂರ್ವಯೋಜಿತವಾಗಿ ಮನವಿ ಸಲ್ಲಿಸಿದರೆ, ಪರಿಶೀಲಿಸಿ ಅನುಮತಿ‌ ನೀಡಲಾಗುವುದು. ಕೊನೆಯ ಹಂತದಲ್ಲಿ‌ ಅನುಮತಿಗಾಗಿ ಅರ್ಜಿ ಸಲ್ಲಿಸುವ ಬದಲು ಮುಂಚಿತವಾಗಿ ಮನವಿ ಪತ್ರ ನೀಡಬೇಕು ಹಾಗೂ ಸಭಾ ಸ್ಥಳ ನಿಗದಿ, ಧ್ವನಿ ವರ್ಧಕಗಳ ಬಳಕೆ ಇನ್ನಿತರ ಅನುಮತಿಗಾಗಿ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ಮೇರೆಗೆ ಅನುಮತಿ ನೀಡಲಾಗುವುದು ಎಂದರು.

ಚುನಾವಣಾ‌ ಮಾದರಿ ನೀತಿ ಸಂಹಿತೆಯು ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಅನ್ವಯವಾಗದೆ, ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತದೆ. ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿಗಾಗಿ ಬರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಏಕಗವಾಕ್ಷಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಜಿಲ್ಲಾ ಚುನಾವಣಾಧಿಕಾರಿಯಾಗಿದ್ದು, ಹೊಸಕೋಟೆ ತಾಲೂಕು ತಹಶೀಲ್ದಾರರು, ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆ. ಹೊಸಕೋಟೆ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ತಾಲೂಕು ಕಚೇರಿಯು ಜಿಲ್ಲಾ ಚುನಾವಣಾಧಿಕಾರಿ ಕೇಂದ್ರ ಕಚೇರಿ ಕಾರ್ಯಸ್ಥಳವಾಗಿದೆ. ನಾಮಪತ್ರ ಇತ್ಯಾದಿ ಪ್ರಕ್ರಿಯೆಗಳು ಮಿನಿ ವಿಧಾನಸೌಧದ ಕಟ್ಟಡದಲ್ಲಿ ನಡೆಯಲಿದೆ ಎಂದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟಾರೆ 212748 ಮತದಾರರಿದ್ದು, ಅದರಲ್ಲಿ 107766 ಪುರುಷ ಮತದಾರರು, 104956 ಮಹಿಳಾ ಮತದಾರರು ಹಾಗೂ 26 ಇತರೆ ಮತದಾರರಿದ್ದಾರೆ. ಬಿಇಎಲ್ ಸಂಸ್ಥೆಯ ಎಂ3 ಮಾದರಿಯ ಇವಿಎಂಗಳನ್ನು ಬಳಸಿ ಉಪ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಹೊಸಕೋಟೆ ತಾಲೂಕಿನಲ್ಲಿ 286 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ ಗ್ರಾಮಾಂತರ ವ್ಯಾಪ್ತಿಯಲ್ಲಿ 237 ಮತಗಟ್ಟೆಗಳು, ಪಟ್ಟಣ ವ್ಯಾಪ್ತಿಯಲ್ಲಿ 49 ಮತಗಟ್ಟೆಗಳಿವೆ. ಒಟ್ಟಾರೆ 286 ಮತಗಟ್ಟೆಗಳಲ್ಲಿ 85 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಈ ಮತಗಟ್ಟೆಗಳಿಗೆ ಸೂಕ್ತ ಭದ್ರತೆ ಕಲ್ಪಿಸಲಾಗುವುದು. ಮತಗಟ್ಟೆಗಳಲ್ಲಿನ ಮೂಲಸೌಕರ್ಯಗಳ ಪರಿಶೀಲನೆಗಾಗಿ ಅಧಿಕಾರಿಗಳನ್ನು ನೇಮಿಸಿದ್ದು, ವರದಿಯ ಆಧಾರದ ಮೇಲೆ ಮತಗಟ್ಟೆಗಳಿಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು. ವಿಕಲಚೇತನ ಮತದಾರರನ್ನು ಮತಗಟ್ಟೆಗೆ ಕರೆ ತರಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್,ಜಿಲ್ಲೆಯಲ್ಲಿ ಉಪ್ಪಾರಹಳ್ಳಿ, ಗಡಿಗೇನಹಳ್ಳಿ, ಬಾಗೂರು, ಬೆಂಡಿಗಾನಹಳ್ಳಿ ಹಾಗೂ ಇಂಟಿಗಾನಹಳ್ಳಿ ಕ್ರಾಸ್​ನಲ್ಲಿ ಒಟ್ಟು 5 ಚೆಕ್ ಪೋಸ್ಟ್​​ಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು,‌ ಶೀಘ್ರದಲ್ಲಿ ಐದು ಡೈನಾಮಿಕ್ ಚೆಕ್ ಪೋಸ್ಟ್​ಗಳನ್ನು ಸ್ಥಾಪಿಸಿ, ಪ್ಲೈಯಿಂಗ್ ಸ್ಕ್ವಾಡ್​ಗಳನ್ನು ನೇಮಿಸಲಾಗುವುದು.

ಮುಂಜಾಗೃತವಾಗಿ ಜಿಲ್ಲೆಯಲ್ಲಿರುವ 1999 ರೌಡಿಶೀಟರ್​ಗಳ ಪರೇಡ್ ನಡೆಸಿ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗುವುದು. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜಿಸುವ ಮೂಲಕ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

Intro:KN_BNG_04_22_by election_Hoskote_Ambarish_7203301
Slug: ಉಪ ಚುನಾವಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ, ಅನುಮತಿ ಇಲ್ಲದೇ ರಾಜಕೀಯ ಕಾರ್ಯಕ್ರಮ ಮಾಡುವಂತಿಲ್ಲ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿಗೊಳಿಸಲಾಗಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನೀತಿ ಸಂಹಿತೆ ಪಾಲಿಸುವ ಮೂಲಕ ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣಾ ಪ್ರಕ್ರಿಯೆ ನಡೆಯಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ರು..

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಅನುಮತಿ ಇಲ್ಲದೇ ರಾಜಕೀಯ ಪಕ್ಷಗಳು ಕಾರ್ಯಕ್ರಮ ಮಾಡುವಂತಿಲ್ಲ . ರಾಜಕೀಯ ಪಕ್ಷಗಳು ಏರ್ಪಡಿಸುವ ಸಭೆ, ವೇದಿಕೆ ಕಾರ್ಯಕ್ರಮಗಳು, ರ್ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಗಳಿಗೆ ಪೂರ್ವಯೋಜಿತವಾಗಿ ಮನವಿ ಸಲ್ಲಿಸಿದರೆ, ಪರಿಶೀಲಿಸಿ ಅನುಮತಿ‌ ನೀಡಲಾಗುವುದು. ಕೊನೆಯ ಹಂತದಲ್ಲಿ‌ ಅನುಮತಿಗಾಗಿ ಅರ್ಜಿ ಸಲ್ಲಿಸುವ ಬದಲು ಮುಂಚಿತವಾಗಿ ಮನವಿ ಪತ್ರ ನೀಡಬೇಕು ಹಾಗೂ ಸಭಾ ಸ್ಥಳ ನಿಗದಿ, ಧ್ವನಿ ವರ್ಧಕಗಳ ಬಳಕೆ ಇನ್ನಿತರ ಅನುಮತಿಗಾಗಿ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ಮೇರೆಗೆ ಅನುಮತಿ ನೀಡಲಾಗುವುದು ಎಂದರು..

ಚುನಾವಣಾ‌ ಮಾದರಿ ನೀತಿ ಸಂಹಿತೆಯು ಹೊಸಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಅನ್ವಯವಾಗದೆ ಜಿಲ್ಲಾದ್ಯಂತ ಜಾರಿಯಲ್ಲಿರುತ್ತದೆ. ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿಗಾಗಿ ಬರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಏಕಗವಾಕ್ಷಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಜಿಲ್ಲಾ ಚುನಾವಣಾಧಿಕಾರಿ ಆಗಿದ್ದು, ಹೊಸಕೋಟೆ ತಾಲ್ಲೂಕು ತಹಶೀಲ್ದಾರರು ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆ. ಹೊಸಕೋಟೆ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ತಾಲ್ಲೂಕು ಕಚೇರಿಯು ಜಿಲ್ಲಾ ಚುನಾವಣಾಧಿಕಾರಿ ಕೇಂದ್ರ ಕಚೇರಿ ಕಾರ್ಯಸ್ಥಳವಾಗಿದೆ. ನಾಮಪತ್ರ ಇತ್ಯಾದಿ ಪ್ರಕ್ರಿಯೆಗಳು ಮಿನಿ ವಿಧಾನಸೌಧದ ಕಟ್ಟಡದಲ್ಲಿ ನಡೆಯಲಿದೆ ಎಂದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟಾರೆ 212748 ಮತದಾರರಿದ್ದು, ಅದರಲ್ಲಿ 107766 ಪುರುಷ ಮತದಾರರು, 104956 ಮಹಿಳಾ ಮತದಾರರು ಹಾಗೂ 26 ಇತರೆ ಮತದಾರರಿದ್ದಾರೆ ಎಂದರಲ್ಲದೇ, ಬಿ.ಇ.ಎಲ್ ಸಂಸ್ಥೆಯ ಎಂ3 (M3)ಮಾದರಿಯ ಇ.ವಿ.ಎಂ ಗಳನ್ನು ಬಳಸಿ ಉಪ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಹೊಸಕೋಟೆ ತಾಲ್ಲೂಕಿನಲ್ಲಿ 286 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ ಗ್ರಾಮಾಂತರ ವ್ಯಾಪ್ತಿಯಲ್ಲಿ 237 ಮತಗಟ್ಟೆಗಳು, ಪಟ್ಟಣ ವ್ಯಾಪ್ತಿಯಲ್ಲಿ 49 ಮತಗಟ್ಟೆಗಳಿವೆ. ಒಟ್ಟಾರೆ 286 ಮತಗಟ್ಟೆಗಳಲ್ಲಿ 85 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ, ಈ ಮತಗಟ್ಟೆಗಳಿಗೆ ಸೂಕ್ತ ಭದ್ರತೆ ಕಲ್ಪಿಸಲಾಗುವುದು ಎಂದರಲ್ಲದೇ, ಮತಗಟ್ಟೆಗಳಲ್ಲಿನ ಮೂಲಭೂತ ಸೌಕರ್ಯಗಳ ಪರಿಶೀಲನೆಗಾಗಿ ಅಧಿಕಾರಿಗಳನ್ನು ನೇಮಿಸಿದ್ದು, ವರದಿಯ ಆಧಾರದ ಮೇಲೆ ಮತಗಟ್ಟೆಗಳಿಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು, ವಿಕಲಚೇತನ ಮತದಾರರನ್ನು ಮತಗಟ್ಟೆಗೆ ಕರೆ ತರಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರವಿ.ಡಿ.ಚೆನ್ನಣ್ಣನವರ್ ಅವರು ಜಿಲ್ಲೆಯಲ್ಲಿ ಉಪ್ಪಾರಹಳ್ಳಿ, ಗಡಿಗೇನಹಳ್ಳಿ, ಬಾಗೂರು, ಬೆಂಡಿಗಾನಹಳ್ಳಿ ಹಾಗೂ ಇಂಟಿಗಾನಹಳ್ಳಿ ಕ್ರಾಸ್ ನ್ನಲ್ಲಿ ಒಟ್ಟು 5 ಚೆಕ್ ಪೋಸ್ಟ್ ಗಳು ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು,‌ ಶೀಘ್ರದಲ್ಲಿ ಐದು ಡೈನಾಮಿಕ್ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿ, ಪ್ಲೈಯಿಂಗ್ ಸ್ಕ್ವಾಡ್ ಗಳನ್ನು ನೇಮಿಸಲಾಗುವುದು ಎಂದರಲ್ಲದೇ ಮುಂಜಾಗೃತವಾಗಿ ಜಿಲ್ಲೆಯಲ್ಲಿರುವ 1999 ರೌಡಿಶೀಟರ್ ಗಳ ಪರೇಡ್ ನಡೆಸಲಾಗುವುದು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗುವುದು ಸೇರಿದಂತೆ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಸೂಕ್ತ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
Body:NoConclusion:No
ETV Bharat Logo

Copyright © 2024 Ushodaya Enterprises Pvt. Ltd., All Rights Reserved.