ದೇವನಹಳ್ಳಿ : ವಿಷನ್ ಬೆಂಗಳೂರು 2022 ಯೋಜನೆಯ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂಪ್ಪನವರು ಹೇಳಿದರು.
ಇಂದು ತಾಲೂಕಿನ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ನಲ್ಲಿ ಸಿಎಂ ಯಡಿಯೂರಪ್ಪನವರು ವಿಷನ್ ಬೆಂಗಳೂರು 2022 ಯೋಜನೆಯ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಅಭಿವೃದ್ಧಿ ಹಾಗೂ ಬೆಂಗಳೂರನ್ನು ಮಾದರಿ ನಗರವನ್ನಾಗಿ ಅಭಿವೃದ್ಧಿ ಮಾಡಲಾಗುವ ಯೋಜನೆಯ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಅಷ್ಟೇ ಅಲ್ಲ, ಇಲ್ಲಿ ನಡೆದ ಚರ್ಚೆಯ ವಿಷಯಗಳನ್ನು ಮುಂಬರುವ ಬಜೆಟ್ನಲ್ಲಿ ಸೇರಿಸಲಾಗುವುದು ಎಂದರು.
ಓದಿ: ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿರಬೇಕು : ಯತ್ನಾಳ್ಗೆ ರೇಣುಕಾಚಾರ್ಯ ಟಾಂಗ್
ಬಜೆಟ್ ಆದ ನಂತರ ಇಲ್ಲಿಯೇ ಮತ್ತೊಮ್ಮೆ ಸಭೆ ನಡೆಸಲಾಗುವುದು. ಇಲ್ಲಿ ನಡೆಸಿರುವ ಚರ್ಚೆಗಳನ್ನು ಸಚಿವ ಸಂಪುಟ ಸಭೆ ಕರೆದು ಚರ್ಚೆ ಮಾಡುತ್ತೇವೆ ಎಂದರು. ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ನಾಳೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬರಲಿದ್ದಾರೆ. ಅವರ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.