ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಕಳ್ಳತನ ನಡೆದಿದೆ. ಬಾಗಿಲು ಮುರಿದು ಕಳ್ಳರು ಒಳನುಗ್ಗಿದ್ದಾರೆ. ತಿಂಗಳ ಕೊನೆಯ ಶನಿವಾರ ರಜೆ ಇರುವ ಮಾಹಿತಿ ತಿಳಿದು ದುಷ್ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏನೆಲ್ಲ ಕಳುವಾಗಿವೆ ಎಂಬುದು ಬ್ಯಾಂಕ್ ಸಿಬ್ಬಂದಿ ವಿಚಾರಣೆಯ ಬಳಿಕ ತಿಳಿಯಲಿದೆ.
ಇದನ್ನೂ ಓದಿ: ಮುರಗೋಡ ಡಿಸಿಸಿ ಬ್ಯಾಂಕ್ ಶಾಖೆಗೆ ಕನ್ನ: 4.41 ಕೋಟಿ ನಗದು, 1.5 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ