ETV Bharat / state

ಬಿಬಿಎಂಪಿ ಕಸದ ಲಾರಿಗೆ ಯುವಕ ಬಲಿ.. ಮೃತನ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ - ಬಿಬಿಎಂಪಿ ಕಸದ ಲಾರಿಗೆ ಯುವಕ ಬಲಿ

ಬಿಬಿಎಂಪಿ ಕಸದ ಲಾರಿಗೆ ಯುವಕ ಬಲಿ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಕುಟುಂಬಕ್ಕೆ ಬಿಬಿಎಂಪಿ ಮತ್ತು ಗುತ್ತಿಗೆದಾರನ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

25-lakh-compensation-to-youthdied-in-accident-bengaluru
ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಯುವಕನ ಸಾವು, ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ
author img

By

Published : Sep 4, 2022, 9:58 PM IST

ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ) : ಬಿಬಿಎಂಪಿ ಕಸದ ಲಾರಿ ಕೆಳಗೆ ಸಿಲುಕಿ ಮೃತಪಟ್ಟ ಯುವಕನಿಗೆ ಬಿಬಿಎಂಪಿ ಮತ್ತು ಗುತ್ತಿಗೆದಾರನ ವತಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಭಾನುವಾರ ಬೆಳಗ್ಗೆ ಬಿಬಿಎಂಪಿ ಕಸದ ಲಾರಿ ಕೆಳಗೆ ಸಿಲುಕಿ ರಾಜು (32) ಎಂಬವರು ಮೃತಪಟ್ಟಿದ್ದರು. ಮೃತ ಯುವಕನಿಗೆ ಸೂಕ್ತ ನ್ಯಾಯ ಸಿಗುವವರೆಗೂ ಶವವನ್ನು ತೆರವು ಮಾಡುವುದಿಲ್ಲವೆಂದು ಅಪಘಾತ ನಡೆದ ಸ್ಥಳದಲ್ಲಿ ಸ್ಥಳೀಯ ಶಾಸಕ ಟಿ ವೆಂಕಟರಮಣಯ್ಯ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಅಧಿಕಾರಿಗಳು ಮತ್ತು ಕಾಂಟ್ರ್ಯಾಕ್ಟರ್ ಮೃತ ರಾಜು ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡುವುದಾಗಿ ಲಿಖಿತ ಭರವಸೆ ನೀಡಿದರು.

ಮುಂಗಡವಾಗಿ 5 ಲಕ್ಷ ರೂಪಾಯಿ ಪರಿಹಾರದ ಚೆಕ್ ಅನ್ನು ಮೃತ ಯುವಕನ ತಾಯಿಗೆ ಹಸ್ತಾಂತರಿಸಲಾಯಿತು. ಪ್ರತಿಭಟನೆ ಹಿಂತೆಗೆದುಕೊಂಡ ಗ್ರಾಮಸ್ಥರು MSGP ಘಟಕ ತೆರವು ಮಾಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ಎಚ್ಚರಿಕೆ ರವಾನಿಸಿದರು.

ಇದನ್ನೂ ಓದಿ : ಬಿಬಿಎಂಪಿ ಕಸದ ಲಾರಿಗೆ ಸಿಲುಕಿ ಬೈಕ್ ಸವಾರ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.