ನೆಲಮಂಗಲ : ಲಾಕ್ ಡೌನ್ ಸಡಿಲಿಕೆ ಮಾಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಜಿಲ್ಲೆಯ ವಿವಿಧ ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರಿನಿಂದ ತುಮಕೂರು ಹಾಗೂ ಇತರೆ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಯಂಟಗಾನಹಳ್ಳಿ ಹಾಗೂ ಹಳೇ ನಿಜಗಲ್ಲು ಚೆಕ್ ಪೋಸ್ಟ್ಗಳಿಗೆ ಭೇಟಿ ನೀಡಿ, ಖುದ್ದು ವಾಹನಗಳ ತಪಾಸಣೆ ನಡೆಸಿದರು. ಚೆಕ್ ಪೋಸ್ಟ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ವಾಹನ ಸಂಚಾರ ಹಾಗೂ ಪ್ರಯಾಣಿಕರ ಬಗ್ಗೆ ಮಾಹಿತಿ ಪಡೆದರು.
ಬಳಿಕ ಬೆಂಗಳೂರಿನಿಂದ ಗೌರಿಬಿದನೂರು ಹಾಗೂ ಇತರೆ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗುಂಜೂರು ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಹಶೀಲ್ದಾರ್ಗಳು, ಪೊಲೀಸ್ ಅಧಿಕಾರಿಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಜಿಲ್ಲಾಧಿಕಾರಿಗೆ ಸಾಥ್ ನೀಡಿದರು.