ದೊಡ್ಡಬಳ್ಳಾಪುರ : ಭಾನುವಾರ ಮುಂಜಾನೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಯುವಕ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಣಿವೆಪುರದಲ್ಲಿ ನಡೆದಿದೆ. ಅಪಘಾತದಲ್ಲಿ ರಾಕೇಶ್(26) ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಸುನೀಲ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಬೆಂಗಳೂರಿನ ಶ್ರೀನಗರದ ನಿವಾಸಿಗಳಾದ ರಾಕೇಶ್ ಮತ್ತು ಸುನೀಲ್ ನಂದಿಬೆಟ್ಟದಲ್ಲಿನ ಸೂರ್ಯೋದಯ ನೋಡಲು ಮುಂಜಾನೆ 4 ಗಂಟೆಗೆ ಬೆಂಗಳೂರಿನಿಂದ ಬೈಕ್ ನಲ್ಲಿ ಹೊರಟಿದ್ದರು. ಕಣಿವೆಪುರ ಎಂಬಲ್ಲಿ ಇವರ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಸುನೀಲ್ ನ ಬೆನ್ನೆಲುಬು ಮುರಿದಿದೆ ಎಂದು ತಿಳಿದುಬಂದಿದೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಾರಾಂತ್ಯದಲ್ಲಿ ಮೋಜು ಮಸ್ತಿಗಾಗಿ ನಂದಿ ಬೆಟ್ಟಕ್ಕೆ ಬರುವ ಯುವಕರು ತಮ್ಮ ಅತಿವೇಗದ ವಾಹನ ಚಾಲನೆಯಿಂದ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. ಅಪಘಾತಗಳಿಗೆ ಕಡಿವಾಣ ಹಾಕಲು ಗ್ರಾಮಗಳ ಬಳಿ ವೇಗ ನಿರೋಧಕಗಳನ್ನು ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಓದಿ : ವಿಷಾಹಾರ ಸೇವನೆ: ಕುಟುಂಬದ ಇಬ್ಬರು ಮಕ್ಕಳ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ