ದೊಡ್ಡಬಳ್ಳಾಪುರ: ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ನೆಲ್ಲುಕುಂಟೆ ಗ್ರಾಮದ ಬಳಿ ಘಟನೆ ನಡೆದಿದ್ದು, ನೆಲ್ಲುಕುಂಟೆಪಾಳ್ಯ ಗ್ರಾಮದ ರಂಜಿತ್ ಹಾಗೂ ಶಾಂತ್ ಕುಮಾರ್ ಎಂಬುವವರು ಮೃತಪಟ್ಟವರು ಎಂದು ತಿಳಿದು ಬಂದಿದೆ.
ಲಾರಿ ಗುದ್ದಿದ ರಭಸಕ್ಕೆ ಬೈಕ್ ಹೊತ್ತಿ ಉರಿದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.