ದೊಡ್ಡಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಅಪ್ಪ,ಮಗ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 207ರ ಮೆಣಸಿ ಗೇಟ್ ಬಳಿ ಘಟನೆ ನಡೆದಿದೆ.
ತುಮಕೂರಿನಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ದೊಡ್ಡಬಳ್ಳಾಪುರದಿಂದ ಹೊಸಹಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ನಾಗರಾಜ್ (40)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಗೂ ಮಗ ಆಕಾಶ್(10) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಸೊಣ್ಣೇನಹಳ್ಳಿ ನಿವಾಸಿಗಳು ಎಂದು ತಿಳಿದುಬಂದಿದೆ. ಘಟನೆಯ ನಂತರ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.