ETV Bharat / state

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಕ್ಷಣಗಣನೆ

author img

By

Published : Sep 10, 2022, 9:06 AM IST

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ತುಮಕೂರಿನ ಕೆಲವು ತಾಲೂಕುಗಳಿಂದ ಜನರು ಬರಲಿದ್ದು, ಈ ಭಾಗದಲ್ಲಿ ಬಿಜೆಪಿಯ ಶಕ್ತಿಯನ್ನು ಪ್ರಶ್ನಿಸುವವರಿಗೆ ಉತ್ತರ ನೀಡುವ ನಿಟ್ಟಿನಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಲಾಗಿದೆ. 40 ಎಕರೆಗೂ ಹೆಚ್ಚು ವಿಸ್ತೀರ್ಣದ ಪ್ರದೇಶದಲ್ಲಿ ಸಮಾವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ.

bjp-janaspandana-convention-in-doddaballapur
ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಕ್ಷಣಗಣನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ 3 ವರ್ಷಗಳ ಜನಸೇವೆ ಮತ್ತು ಸಬಲೀಕರಣದ ಕಾರ್ಯದ ಹಿನ್ನೆಲೆಯಲ್ಲಿ ಇಂದು ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಬೃಹತ್ ಶಕ್ತಿ ಪ್ರದರ್ಶನ ಮೂಲಕ ಸರ್ಕಾರದ ರಿಪೋರ್ಟ್ ಕಾರ್ಡ್ ಅನ್ನು ಜನತೆಯ ಮುಂದಿಡಲಾಗುತ್ತಿದೆ.

ರಾಜ್ಯ ಬಿಜೆಪಿ ಸರ್ಕಾರದ 3 ವರ್ಷಗಳ ಸಾಧನೆಯ ಕುರಿತು ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಎಲ್ ಆಂಡ್ ಟಿ ಮುಂಭಾಗದಲ್ಲಿ 'ಜನಸ್ಪಂದನ' ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಸಮಾರಂಭ ಉದ್ಘಾಟನೆಯಾಗಲಿದೆ.

bjp-janaspandana-convention-in-doddaballapur
ಜನಸ್ಪಂದನ ಕಾರ್ಯಕ್ರಮಕ್ಕೆ ಸಿದ್ಧತೆ

ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ 2 ವರ್ಷಗಳಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳು ಮತ್ತು ಕಾರ್ಯಾನುಷ್ಠಾನ, ಈಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಂದು ವರ್ಷಕ್ಕೂ ಹೆಚ್ಚು ಕಾಲ ಕೈಗೊಂಡ ಹೊಸ ಕಾರ್ಯಕ್ರಮಗಳನ್ನು ಸೇರಿ 3 ವರ್ಷಗಳ ರಿಪೋರ್ಟ್ ಕಾರ್ಡ್ ಅನ್ನು ಜನರ ಮುಂದೆ ಇಡಲಾಗುತ್ತದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ತುಮಕೂರಿನ ಕೆಲವು ತಾಲೂಕುಗಳಿಂದ ಜನರು ಬರಲಿದ್ದು, ಈ ಭಾಗದಲ್ಲಿ ಬಿಜೆಪಿಯ ಶಕ್ತಿಯನ್ನು ಪ್ರಶ್ನಿಸುವವರಿಗೆ ಉತ್ತರ ನೀಡುವ ನಿಟ್ಟಿನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. 40 ಎಕರೆಗೂ ಹೆಚ್ಚು ವಿಸ್ತೀರ್ಣದ ಪ್ರದೇಶದಲ್ಲಿ ಸಮಾವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೂರು ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇಲ್ಲಿಯೇ ತಾತ್ಕಾಲಿಕ ಅಡುಗೆ ಮನೆಯನ್ನೂ ಮಾಡಲಾಗಿದೆ. ದೊಡ್ಡದಾಗಿ ಉಪಹಾರ- ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಎರಡು ದೊಡ್ಡ ಕ್ಯಾಟರಿಂಗ್ ಸಂಸ್ಥೆಗಳಿಗೆ ಇದರ ಗುತ್ತಿಗೆ ಕೊಡಲಾಗಿದೆ.

3 ಲಕ್ಷ ಜನರಿಗೆ ಊಟ ಸಿದ್ಧವಾಗುತ್ತಿದೆ. ವೆಜಿಟೇಬಲ್ ಪಲಾವ್, ಮೊಸರನ್ನ, ಬಾದುಷಾ ಸಿಹಿತಿಂಡಿ ನೀಡಲಾಗುತ್ತದೆ. ವಾಹನ ನಿಲುಗಡೆಗೆ 200 ಎಕರೆಗೂ ಹೆಚ್ಚಿನ ವಿಸ್ತೀರ್ಣದಲ್ಲಿ 12 ಕಡೆ ಜಾಗಗಳನ್ನು ಗುರುತಿಸಲಾಗಿದೆ. ಟ್ರಾಫಿಕ್ ಜಾಮ್ ಆಗದಂತೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಪೊಲೀಸ್ ಅಧಿಕಾರಿಗಳ ಜೊತೆ ವಿಶೇಷ ಸಭೆ ಮಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. 5 ಸಾವಿರ ಬಸ್‍ಗಳನ್ನು ಈಗ ನಿಗದಿಪಡಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ದ್ವಿಚಕ್ರ- ಚತುಷ್ಚಕ್ರ ವಾಹನಗಳು ಬರಲಿವೆ ಎನ್ನಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಚುನಾವಣೆ ಮೇಲೆ ಕಣ್ಣು.. 15 ರಾಜ್ಯಗಳ ಉಸ್ತುವಾರಿ ಘೋಷಿಸಿದ ಬಿಜೆಪಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.