ETV Bharat / state

ಸೆಪ್ಟೆಂಬರ್‌ 8ರ ಬಿಜೆಪಿ ಜನೋತ್ಸವ ಕಾರ್ಯಕ್ರಮಕ್ಕೆ 3 ಲಕ್ಷ ಜನ: ಸಚಿವ ಡಾ.ಕೆ.ಸುಧಾಕರ್​ - ETv Bharat Kannada

ಜನೋತ್ಸವಕ್ಕೆ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ, ತುಮಕೂರು ಹಾಗೂ ಬೆಂಗಳೂರು ನಗರದ ಕೆಲ ಕ್ಷೇತ್ರಗಳಿಂದ ಸುಮಾರು 3 ಲಕ್ಷ ಜನರು ಬರಲಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್​ ತಿಳಿಸಿದ್ದಾರೆ.

anotsava program pre-meeting
ಜನೋತ್ಸವ ಕಾರ್ಯಕ್ರಮ ಪೂರ್ವಭಾವಿ ಸಭೆ
author img

By

Published : Sep 4, 2022, 10:45 AM IST

Updated : Sep 4, 2022, 1:27 PM IST

ದೊಡ್ಡಬಳ್ಳಾಪುರ : ಜುಲೈ 28 ರಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತನ ಸಾವಿನಿಂದ ಮುಂದೂಡಲಾಗಿತ್ತು. ಇದೇ ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸುತ್ತಮುತ್ತಲಿನ ಜಿಲ್ಲೆಗಳಿಂದ 3 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವುದಾಗಿ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ತಮ್ಮಶೆಟ್ಟಿಹಳ್ಳಿ ಗ್ರಾಮದಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಪೂರ್ವಭಾವಿ ಸಭೆಯನ್ನು ಈಗಾಗಲೇ ನಡೆಸಲಾಗಿದೆ. ದೊಡ್ಡಬೆಳವಂಗಲದ ವೀರಭದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್, ಕೋಲಾರ ಜಿಲ್ಲಾ ಉಸ್ತುವಾರಿ ‌ಸಚಿವ ಮುನಿರತ್ನ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಟಿ ಬಿ ನಾಗರಾಜ್, ಕೋಲಾರ‌ ಸಂಸದ ಮುನಿಸ್ವಾಮಿ ಭಾಗವಹಿಸಿದ್ದರು.

ಜನೋತ್ಸವ ಕಾರ್ಯಕ್ರಮ ಪೂರ್ವಭಾವಿ ಸಭೆ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುಧಾಕರ್, ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಒಟ್ಟು 1500 ಬಸ್ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾಜಿ ಸಿಎಂ ಯಡಿಯೂರಪ್ಪ, ಸಂಪುಟ ಸಹೋದ್ಯೋಗಿಗಳು ಭಾಗವಹಿಸಲಿದ್ದಾರೆ. ಈ ಮೂಲಕವೇ ಚುನಾವಣೆ ಕಾವು ಏರಲಿದೆ ಎಂದರು.

ನಾವು ಹುಟ್ಟುಹಬ್ಬ ಆಚರಿಸುತ್ತಿಲ್ಲ- ಸಿದ್ದರಾಮೋತ್ಸವಕ್ಕೆ ಟಾಂಗ್: ದೊಡ್ಡಬಳ್ಳಾಪುರದಲ್ಲಿ ನಾವು ಯಾವುದೇ ನಾಯಕರ ಹುಟ್ಟುಹಬ್ಬ ಆಚರಿಸುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳ ಉತ್ಸವವಾಗಿ ಜನೋತ್ಸವ ಆಚರಿಸುತ್ತಿದ್ದೇವೆ ಎಂದು ಹೆಸರು ಹೇಳದೇ ಸಿದ್ದರಾಮೋತ್ಸವವನ್ನು ಸುಧಾಕರ್‌ ಟೀಕಿಸಿದರು.

ಜಿಲ್ಲಾಡಳಿತ ಕೇಂದ್ರ ಇರುವ ತಾಲೂಕಿನಲ್ಲಿ ಜಿಲ್ಲಾ ಕೇಂದ್ರ: ಜನೋತ್ಸವಕ್ಕೆ ಜಿಲ್ಲಾ ಕೇಂದ್ರಕ್ಕಾಗಿ ಹೋರಾಟ ಸಹ ದೊಡ್ಡ ಸವಾಲಾಗಿದೆ. ಈ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನೋತ್ಸವಕ್ಕೆ ಜಿಲ್ಲಾ ಕೇಂದ್ರ ಹೋರಾಟ ಯಾವುದೇ ಸಮಸ್ಯೆಯಾಗುವುದಿಲ್ಲ. ಜಿಲ್ಲಾಡಳಿತ ಕೇಂದ್ರ ಇರುವ ತಾಲೂಕಿನಲ್ಲಿ ಜಿಲ್ಲಾ ಕೇಂದ್ರ ಘೋಷಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳೂಂದಿಗೆ ಚರ್ಚಿಸಿ ಬಗೆಹರಿಹಲಾಗುವುದು ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಸೆಪ್ಟೆಂಬರ್‌ 8 ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ: ಸಚಿವ ಸುಧಾಕರ್

Last Updated : Sep 4, 2022, 1:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.